Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 3:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ಸ್ನಾನಮಾಡಿ, ಸುಗಂಧತೈಲವನ್ನು ಹಚ್ಚಿಕೊಂಡು, ಶ್ರೇಷ್ಠವಸ್ತ್ರಗಳನ್ನು ಧರಿಸಿಕೊಂಡು ಅಲ್ಲಿಗೆ ಹೋಗು; ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವರೆಗೂ ಮರೆಯಾಗಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀನು ಸ್ನಾನಮಾಡಿಕೊಂಡು ಸುಗಂಧ ತೈಲವನ್ನು ಹಚ್ಚಿ, ಸೊಗಸಾದ ಉಡುಪನ್ನು ತೊಟ್ಟುಕೊ. ಆಮೇಲೆ ಕಣಕ್ಕೆ ಹೋಗು. ಅವನು ಅನ್ನಪಾನಮಾಡಿ ಮುಗಿಸುವವರೆಗೂ ಅವನಿಗೆ ಕಾಣಿಸಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ಸ್ನಾನಮಾಡಿ ತೈಲಹಚ್ಚಿಕೊಂಡು ಶ್ರೇಷ್ಠವಸ್ತ್ರಗಳನ್ನುಟ್ಟು ಅಲ್ಲಿಗೆ ಹೋಗು; ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವರೆಗೂ ಮರೆಯಾಗಿದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನು ಸ್ನಾನ ಮಾಡಿ ಶೃಂಗರಿಸಿಕೊಂಡು ಶ್ರೇಷ್ಠವಾದ ಉಡುಪುಗಳನ್ನು ಧರಿಸಿಕೊಂಡು ಕಣಕ್ಕೆ ಹೋಗು. ಆದರೆ ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವರೆಗೆ ಅವನಿಗೆ ಮರೆಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀನು ಸ್ನಾನಮಾಡಿ ಎಣ್ಣೆ ಹಚ್ಚಿಕೊಂಡು ನಿನ್ನ ಒಳ್ಳೆಯ ವಸ್ತ್ರಗಳನ್ನು ಧರಿಸಿಕೊಂಡು ಆ ಕಣಕ್ಕೆ ಹೋಗು. ಆದರೆ ಆ ಮನುಷ್ಯನು ತಿಂದು ಕುಡಿದು ತೀರಿಸುವವರೆಗೂ ಅವನಿಗೆ ನೀನು ಅಲ್ಲಿರುವದು ಅವನಿಗೆ ತಿಳಿಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 3:3
10 ತಿಳಿವುಗಳ ಹೋಲಿಕೆ  

ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ,


ಮೂರನೆಯ ದಿನದಲ್ಲಿ ಎಸ್ತೇರಳು ರಾಜವಸ್ತ್ರಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ, ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತುಕೊಂಡಿದ್ದನು.


ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳೆದುಕೋ.


ನಿನ್ನ ಬಟ್ಟೆಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಗೆ ಎಣ್ಣೆಯ ಕೊರತೆ ಇಲ್ಲದಿರಲಿ.


ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.


ಈಗ ನೀನು ಯಾರ ಹೆಣ್ಣಾಳುಗಳ ಜೊತೆಯಲ್ಲಿರುತ್ತೀಯೋ ಆ ಬೋವಜನು ನಮ್ಮ ಸಂಬಂಧಿಕನಲ್ಲವೇ? ಅವನು ಈ ರಾತ್ರಿ ಕಣದಲ್ಲಿ ಜವೆಗೋದಿಯನ್ನು ತೂರುವನು.


ಅವನು ಮಲಗಿದ ಸ್ಥಳವನ್ನು ತಿಳಿದುಕೊಂಡು ಹೋಗಿ ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದು ಬಿಟ್ಟು ಅಲ್ಲೇ ಮಲಗಿಕೋ; ಆ ಮೇಲೆ ಮಾಡತಕ್ಕದ್ದನ್ನು ಅವನು ನಿನಗೆ ತಿಳಿಸುವನು” ಅಂದಳು.


ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ, ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.


“ಆಗ ನಾನು ನೀರಿನಲ್ಲಿ ನಿನ್ನನ್ನು ಸ್ನಾನಮಾಡಿಸಿ ನಿನ್ನ ಮೇಲಣ ರಕ್ತವನ್ನು ತೊಳೆದುಬಿಟ್ಟು ನಿನಗೆ ತೈಲವನ್ನು ಹಚ್ಚಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು