ರೂತಳು 3:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಬೋವಜನು ಅನ್ನಪಾನಗಳನ್ನು ತೆಗೆದುಕೊಂಡು ಸಂತುಷ್ಟನಾಗಿ ರಾಶಿಯ ಬಳಿಯಲ್ಲಿ ಮಲಗಿದ ಮೇಲೆ ರಹಸ್ಯವಾಗಿ ಬಂದು ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದುಬಿಟ್ಟು, ಕಾಲ್ಬದಿಯಲ್ಲಿ ಮಲಗಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇತ್ತ ಬೋವಜನು ಅನ್ನಪಾನ ಮಾಡಿ ಸಂತುಷ್ಟನಾಗಿದ್ದನು. ಅನಂತರ ಜವೆಗೋದಿಯ ರಾಶಿಯ ಬಳಿ ಹೋಗಿ ಮಲಗಿಕೊಂಡನು. ರೂತಳು ನಿಶ್ಯಬ್ಧವಾಗಿ ಅವನ ಬಳಿಗೆ ಹೋದಳು. ಅವನ ಪಾದಗಳ ಮೇಲಿದ್ದ ಹೊದಿಕೆಯನ್ನು ಮೆತ್ತಗೆ ಸರಿಸಿ, ಅಲ್ಲೇ ಮಲಗಿಕೊಂಡಳು. ಸುಮಾರು ನಡುರಾತ್ರಿಯಲ್ಲಿ ಅವನಿಗೆ ತಟ್ಟನೆ ಎಚ್ಚರವಾಯಿತು. ಬಗ್ಗಿ ನೋಡಿದಾಗ ಸ್ತ್ರೀಯೊಬ್ಬಳು ಪಾದಗಳ ಬಳಿ ಮಲಗಿರುವುದನ್ನು ಕಂಡು ಚಕಿತಗೊಂಡು, “ನೀನು ಯಾರು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅನ್ನಪಾನಗಳನ್ನು ತೆಗೆದುಕೊಂಡು ಸಂತೃಪ್ತನಾಗಿದ್ದ ಬೋವಜನು ಧಾನ್ಯದ ರಾಶಿಯ ಹತ್ತಿರ ಮಲಗಲು ಹೋದನು. ಆಗ ರೂತಳು ರಹಸ್ಯವಾಗಿ ಬಂದು ಅವನ ಪಾದಗಳ ಮೇಲಿನ ಹೊದಿಕೆಯನ್ನು ತೆಗೆದು ಅವನ ಪಾದಗಳ ಬಳಿಯಲ್ಲಿಯೇ ಮಲಗಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಬೋವಜನು ತಿಂದು ಕುಡಿದು ಸಂತುಷ್ಟನಾಗಿದ್ದನು. ಅವನು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿಕೊಂಡನು. ಆಗ ರೂತಳು ಮೆಲ್ಲಗೆ ಬಂದು ಅವನ ಪಾದಗಳ ಮೇಲಿದ್ದ ಹೊದಿಕೆಯನ್ನು ತೆಗೆದು ಮಲಗಿಕೊಂಡಳು. ಅಧ್ಯಾಯವನ್ನು ನೋಡಿ |