Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬೋವಜನು ಊರಬಾಗಿಲಿನ ಬಳಿಗೆ ಹೋಗಿ ಅಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿದ್ದುದನ್ನು ಕಂಡು, ಬೋವಜನು ಅವನಿಗೆ “ಬಾರಪ್ಪಾ, ಇಲ್ಲಿ ಬಂದು ಕುಳಿತುಕೋ” ಎಂದು ಕರೆಯಲು ಅವನು ಬಂದು ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇತ್ತ ಬೋವಜನು ಊರಿನ ಸಭಾಮಂಟಪದ ಬಳಿ ಹೋಗಿ ಅಲ್ಲಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೋವಜನು ಹೋಗಿ ಊರುಬಾಗಲಲ್ಲಿ ಕೂತನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿರುವದನ್ನು ಕಂಡು ಅವನನ್ನು - ಎಲಾ, ಅಪ್ಪಾ, ಇತ್ತ ಬಂದು ಕೂತುಕೋ ಎಂದು ಕರೆಯಲು ಅವನು ಬಂದು ಕೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬೋವಜನು ನಗರದ್ವಾರದ ಬಳಿಯಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಅಲ್ಲಿಂದ ಹಾದು ಹೋಗುವವರೆಗೂ ಅವನು ಅಲ್ಲಿಯೇ ಕುಳಿತಿದ್ದನು. ಅವನನ್ನು ಕಂಡ ಬೋವಜನು, “ಸ್ನೇಹಿತನೇ ಇಲ್ಲಿ ಬಾ, ಇಲ್ಲಿ ಕುಳಿತುಕೋ” ಎಂದು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬೋವಜನು ಪಟ್ಟಣದ ಬಾಗಿಲ ಬಳಿ ಹೋಗಿ ಕುಳಿತುಕೊಂಡನು. ಆಗ ಬೋವಜನು ಹೇಳಿದ್ದ ಆ ವಿಮೋಚಕ ಬಂಧುವು ಹಾದುಹೋಗುತ್ತಿದ್ದನು. ಬೋವಜನು ಅವನಿಗೆ, “ನನ್ನ ಸ್ನೇಹಿತನೇ, ಈ ಕಡೆಗೆ ಬಂದು ಇಲ್ಲಿ ಕುಳಿತುಕೋ,” ಎಂದನು. ಅವನು ಬಂದು ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 4:1
21 ತಿಳಿವುಗಳ ಹೋಲಿಕೆ  

ನಾನು ಸಮೀಪಬಂಧುವೆಂಬುದು ನಿಜ; ಆದರೂ ನನಗಿಂತ ಸಮೀಪ ಬಂಧು ಒಬ್ಬನಿದ್ದಾನೆ.


ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸದೆ ಹೋದರೆ ಅವಳು ಊರ ಬಾಗಿಲಿಗೆ ಹೋಗಿ ಅಲ್ಲಿಯ ಹಿರಿಯರಿಗೆ, “ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸುವುದಕ್ಕೆ ಸಿದ್ಧನಿಲ್ಲ. ಅವನು ಮೈದುನಧರ್ಮವನ್ನು ನಡೆಸುವುದಿಲ್ಲ ಅನ್ನುತ್ತಾನೆ” ಎಂದು ತಿಳಿಸಬೇಕು.


ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.


ನ್ಯಾಯಸ್ಥಾನದಲ್ಲಿ ನನಗೆ ಸಹಾಯ ಉಂಟೆಂದು, ಅನಾಥನ ಮೇಲೆ ಕೈಮಾಡಿದೆನೋ?


ಊರ ಮುಂದಿನ ಚಾವಡಿಗೆ ಹೋದಾಗಲೂ, ಚೌಕದಲ್ಲಿ ಆಸನವನ್ನು ಹಾಕಿಸಿಕೊಂಡಾಗಲೂ


ಅವರ ಮಾತನ್ನು ಕೇಳದೆಹೋದರೆ ತಂದೆತಾಯಿಗಳು ಅವನನ್ನು ಹಿಡಿದು,


ಎಲೈ, ಎಲೈ ಉತ್ತರದೇಶದಿಂದ ಓಡಿ ಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದುರಿಸಿದ್ದೆನಲ್ಲಾ; ಇದು ಯೆಹೋವನ ನುಡಿ.


“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.


ಆಗ ಆ ಪುರುಷನನ್ನಾಗಲಿ ಅಥವಾ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲೆಸೆದು ಕೊಲ್ಲಬೇಕು.


ಎಫ್ರೋನನು ಅಲ್ಲಿ ಹಿತ್ತಿಯರ ನಡುವೆ ಕುಳಿತಿದ್ದನು. ಹೀಗಿರಲಾಗಿ ಹಿತ್ತಿಯನಾದ ಎಫ್ರೋನನು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಎದುರಿನಲ್ಲಿ ಅಬ್ರಹಾಮನಿಗೆ,


ಆಗ ಹಮೋರನೂ ಅವನ ಮಗನಾದ ಶೆಕೆಮನೂ ಊರ ಬಾಗಿಲಿಗೆ ಬಂದು ಊರಿನವರೆಲ್ಲರ ಸಂಗಡ ಮಾತನಾಡಿ ಅವರಿಗೆ,


ಅಂಥ ಪಟ್ಟಣಕ್ಕೆ ಓಡಿ ಹೋದವನು ಮೊದಲು ಊರ ಬಾಗಿಲಲ್ಲೇ ನಿಂತುಕೊಂಡು ಅಲ್ಲಿನ ಹಿರಿಯರಿಗೆ ತನ್ನ ಸಂಗತಿಯನ್ನು ತಿಳಿಯಪಡಿಸಲಿ. ಅವರು ಅವನನ್ನು ಊರೊಳಕ್ಕೆ ಸೇರಿಸಿಕೊಂಡು, ಅವನ ವಾಸಕ್ಕೆ ಸ್ಥಳ ಕೊಡಲಿ


ಅತ್ತೆಯು “ನನ್ನ ಮಗಳೇ, ಈ ಕಾರ್ಯವು ಏನಾಗುವುದೆಂದು ಗೊತ್ತಾಗುವವರೆಗೂ ಸುಮ್ಮನಿರು; ಈ ವಿಷಯವನ್ನು ಇತ್ಯರ್ಥ ಮಾಡುವವರೆಗೂ ಅವನಿಗೆ ಸಮಾಧಾನವಿರಲಾರದು” ಎಂದು ಹೇಳಿದಳು.


ಅವನು ಹೊತ್ತಾರೆಯಲ್ಲಿ ಎದ್ದು ಊರ ಬಾಗಿಲಿನ ಬಳಿಯಲ್ಲಿ ನಿಂತುಕೊಳ್ಳುವನು. ಯಾರಾದರೂ ತಮ್ಮ ವ್ಯಾಜ್ಯವನ್ನು ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋಮನು ಕಂಡರೆ ಅಂಥವರನ್ನು ತನ್ನ ಬಳಿಗೆ ಕರೆದು, “ನೀವು ಯಾವ ಊರಿನರವರು?” ಎಂದು ಕೇಳುವನು. ಅವರು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಒಂದು ಕುಲಕ್ಕೆ ಸೇರಿದವರು” ಎಂದು ಉತ್ತರ ಕೊಡುವರು.


ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು. ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಪ್ರವಾದಿಸತೊಡಗಿದರು.


ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ. ಕುಡುಕರು ನನ್ನ ವಿಷಯವನ್ನು ಹಾಡಿ ಪರಿಹಾಸ್ಯ ಮಾಡುತ್ತಾರೆ.


ಆಕೆಯ ಪತಿಯು ನ್ಯಾಯಸ್ಥಾನದಲ್ಲಿ, ದೇಶದ ಹಿರಿಯರ ಮಧ್ಯದಲ್ಲಿ ಕುಳಿತಿರುವಾಗ ಪ್ರಸಿದ್ಧನಾಗಿ ಕಾಣುವನು.


ಪತ್ರಕ್ಕೆ ಸಹಿ ಹಾಕಿ ಮುಚ್ಚಿ ಆ ಮುಚ್ಚಳಕ್ಕೆ ಸಾಕ್ಷಿಗಳನ್ನು ಹಾಕಿಸಿ, ತಕ್ಕಡಿಯಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆನು.


ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು