ರೂತಳು 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದಕ್ಕೆ ಊರ ಬಾಗಿಲಲ್ಲಿ ಕೂಡಿ ಬಂದಿದ್ದ ಹಿರಿಯರೂ, ಎಲ್ಲಾ ಜನರೂ “ಹೌದು, ನಾವೇ ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ. ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಅಭಿವೃದ್ಧಿ ಹೊಂದು, ಬೇತ್ಲೆಹೇಮಿನಲ್ಲಿ ಪ್ರಸಿದ್ಧನಾಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ಊರಿನ ಹಿರಿಯರು ಮತ್ತು ನೆರೆದಿದ್ದ ಸಭಿಕರು: “ಹೌದು, ನಾವೆಲ್ಲರೂ ಸಾಕ್ಷಿಗಳು. ಇಸ್ರಯೇಲಿನ ಮನೆತನವನ್ನು ವೃದ್ಧಿಗೊಳಿಸಿದ ರಾಹೆಲ್ ಮತ್ತು ಲೆಯಾ ಎಂಬ ಕುಲೀನೆಯರನ್ನು ಸರ್ವೇಶ್ವರ ಆಶೀರ್ವದಿಸಲಿ! ಎಫ್ರಾತ ಕುಲದಲ್ಲಿ ಧನವಂತನಾಗು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇದಕ್ಕೆ ನೀವು ಸಾಕ್ಷಿಗಳು ಎಂದು ಹೇಳಿದ್ದಕ್ಕೆ ಊರುಬಾಗಲಲ್ಲಿ ಕೂಡಿದ್ದ ಹಿರಿಯರೂ ಎಲ್ಲಾ ಜನರೂ - ಹೌದು, ನಾವು ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಸತ್ಕಾರ್ಯವನ್ನು ಮಾಡು; ಬೇತ್ಲೆಹೇವಿುನಲ್ಲಿ ಘನವಂತನಾಗು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಗರದ್ವಾರದಲ್ಲಿ ಸೇರಿದ್ದ ಜನರೆಲ್ಲರು ಮತ್ತು ಹಿರಿಯರು ಸಾಕ್ಷಿಗಳಾಗಿದ್ದರು. ಅವರು, “ಈ ಸ್ತ್ರೀಯು ನಿನ್ನ ಮನೆಗೆ ಬರುವಳು. ಯೆಹೋವನು ಅವಳನ್ನು ರಾಹೇಲಳಂತೆಯೂ ಲೇಯಾಳಂತೆಯೂ ಮಾಡಲಿ. ರಾಹೇಲಳು ಮತ್ತು ಲೇಯಾಳು ಇಸ್ರೇಲಿನ ಮನೆಯನ್ನು ಕಟ್ಟಿದರು. ಎಫ್ರಾತಿನಲ್ಲಿ ಪ್ರಭಾವ ಶಾಲಿಯಾಗು! ಬೆತ್ಲೆಹೇಮಿನಲ್ಲಿ ಸುಪ್ರಸಿದ್ಧನಾಗು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಊರುಬಾಗಿಲಲ್ಲಿ ಕೂಡಿದ್ದ ಸಮಸ್ತ ಜನರೂ ಹಿರಿಯರೂ, “ನಾವು ಸಾಕ್ಷಿಗಳೇ, ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಯೆಹೋವ ದೇವರು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡಲಿ. ಎಫ್ರಾತದಲ್ಲಿ ಧನವಂತನಾಗಿರು, ಬೇತ್ಲೆಹೇಮಿನಲ್ಲಿ ಘನವಂತನಾಗಿರು. ಅಧ್ಯಾಯವನ್ನು ನೋಡಿ |