Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 4:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬೋವಜನು ರೂತಳನ್ನು ಹೆಂಡತಿಯನ್ನಾಗಿ ಪರಿಗ್ರಹಿಸಿದ್ದರಿಂದ ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬೋವಜನು ರೂತಳನ್ನು ಮದುವೆಯಾಗಿ ಮನೆಗೆ ಕರೆದುಕೊಂಡು ಹೋದನು. ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ಆಕೆ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು. ಊರಿನ ಮಹಿಳೆಯರು ನವೊಮಿಗೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬೋವಜನು ರೂತಳನ್ನು ಹೆಂಡತಿಯನ್ನಾಗಿ ಪರಿಗ್ರಹಿಸಿ ಕೂಡಲು ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬೋವಜನು ರೂತಳನ್ನು ಮದುವೆಯಾದನು. ಯೆಹೋವನ ಕೃಪೆಯಿಂದ ರೂತಳು ಗರ್ಭವತಿಯಾಗಿ ಗಂಡುಮಗುವಿಗೆ ಜನ್ಮಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬೋವಜನು ರೂತಳನ್ನು ಮದುವೆಯಾದನು. ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳೊಂದಿಗೆ ಬಾಳಿದಾಗ, ರೂತಳು ಯೆಹೋವ ದೇವರ ಅನುಗ್ರಹದಿಂದ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 4:13
12 ತಿಳಿವುಗಳ ಹೋಲಿಕೆ  

ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು, “ನಿನ್ನ ಜೊತೆಯಲ್ಲಿರುವ ಜನರು ಯಾರು?” ಎಂದು ಕೇಳಲು ಯಾಕೋಬನು ಅವನಿಗೆ, “ದೇವರು ನಿನ್ನ ಸೇವಕನಿಗೆ ಕೃಪೆಯಿಂದ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು” ಎಂದು ಹೇಳಿದನು.


ಲೇಯಳು ಯಾಕೋಬನಿಗೆ ಅಲಕ್ಷ್ಯವಾಗಿದ್ದಾಳೆಂಬುದನ್ನು ಯೆಹೋವನು ನೋಡಿ, ಆಕೆಯು ಗರ್ಭಧರಿಸುವಂತೆ ಅನುಗ್ರಹಿಸಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.


ನನ್ನ ಮಗಳೇ, ಈಗ ಭಯಪಡಬೇಡ. ನೀನು ಗುಣವಂತೆಯೆಂಬುದು ಊರಿನವರಿಗೆಲ್ಲಾ ತಿಳಿದಿದೆ; ಆದ್ದರಿಂದ ನೀನು ಹೇಳಿದ್ದನ್ನೆಲ್ಲಾ ಮಾಡುವೆನು.


ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.


ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!


ಹೊಟ್ಟೆತುಂಬಾ ಊಟಮಾಡುತ್ತಿದ್ದವರು ಅನ್ನಕ್ಕೋಸ್ಕರ ಕೂಲಿಮಾಡುತ್ತಾರೆ; ಹಸಿದವರು ಉಂಡು ಸುಖದಿಂದಿರುತ್ತಾರೆ. ಬಂಜೆಯು ಏಳು ಮಂದಿ ಮಕ್ಕಳನ್ನು ಹೆರುವಳು; ಮಕ್ಕಳುಳ್ಳವಳು ದಿಕ್ಕಿಲ್ಲದೆ ಹೋಗುವಳು.


ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ;


ಯೆಹೋವನು ಈ ಸ್ತ್ರೀಯ ಮೂಲಕ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆಯು ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಪೆರೆಚನ ಮನೆಗೆ ಸಮಾನವಾಗಲಿ” ಅಂದರು.


ಯಾಕೋಬನು ರಾಹೇಲಳ ಮೇಲೆ ಕೋಪಗೊಂಡು, “ದೇವರು ನಿನಗೆ ಮಕ್ಕಳನ್ನು ಕೊಡದೆ ಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ” ಎಂದನು.


ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.


ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ, ಅವನ ಪತ್ನಿಯನ್ನೂ ಮತ್ತು ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು