Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 4:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇವನು ನಿನಗೆ ನವಚೈತನ್ಯ ನೀಡಿ ಪುನರ್ಜನ್ಮ ಹೊಂದುವಂತೆ ಮಾಡುವನು, ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಕನಾಗಿರುವನು. ನಿನ್ನನ್ನು ಬಹಳವಾಗಿ ಪ್ರೀತಿಸುತ್ತಾ ಏಳು ಮಂದಿ ಮಕ್ಕಳಿಗಿಂತ ಹೆಚ್ಚಾಗಿ ನಿನ್ನನ್ನು ಪ್ರೀತಿಸಿ ಗೌರವಿಸುವ ನಿನ್ನ ಸೊಸೆಯು ಇವನನ್ನು ಹೆತ್ತಳಲ್ಲಾ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವನು ನಿನಗೆ ನವಚೈತನ್ಯವನ್ನು ಕೊಟ್ಟು ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಣೆಯನ್ನು ನೀಡುವನು. ಸಪ್ತಕುವರರಿಗಿಂತ ನಿನಗೆ ಮೆಚ್ಚುಗೆ ಆದ ನಿನ್ನ ಪ್ರಿಯ ಸೊಸೆ ಈ ಮಗುವನ್ನು ನಿನಗೆ ಕೊಟ್ಟಿದ್ದಾಳೆ!” ಎಂದು ಹರಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇವನು ನಿನ್ನನ್ನು ಉಜ್ಜೀವಿಸಮಾಡುವನು; ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಕನಾಗಿರುವನು. ನಿನ್ನನ್ನು ಬಹಳವಾಗಿ ಪ್ರೀತಿಸುತ್ತಾ ಏಳು ಮಂದಿ ಮಕ್ಕಳಿಗಿಂತ ನಿನಗೆ ಉತ್ತಮಳಾಗಿರುವ ನಿನ್ನ ಸೊಸೆಯು ಇವನನ್ನು ಹೆತ್ತಳಲ್ಲಾ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವನು ನಿನ್ನನ್ನು ಉಜ್ಜೀವಿಸಮಾಡುವನು. ವೃದ್ಧಾಪ್ಯದಲ್ಲಿ ನಿನ್ನ ಸಂರಕ್ಷಕನಾಗಿರಲಿ. ನಿನ್ನನ್ನು ಪ್ರೀತಿಸುವ ನಿನ್ನ ಸೊಸೆಯು ನಿನಗಾಗಿ ಈ ಮಗುವನ್ನು ಹೆತ್ತಿದ್ದಾಳೆ. ಅವಳು ನಿನಗೆ, ಏಳುಮಂದಿ ಗಂಡುಮಕ್ಕಳಿಗಿಂತಲೂ ಶ್ರೇಷ್ಠವಾಗಿದ್ದಾಳೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನು ನಿನಗೆ ಪ್ರಾಣವನ್ನು ಪುನರುಜ್ಜೀವಿಸುವವನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವನಾಗಿಯೂ ಇರುವನು. ಏಕೆಂದರೆ ನಿನ್ನನ್ನು ಪ್ರೀತಿ ಮಾಡುವ ಏಳುಮಂದಿ ಮಕ್ಕಳಿಗಿಂತ ನಿನಗೆ ಉತ್ತಮಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 4:15
10 ತಿಳಿವುಗಳ ಹೋಲಿಕೆ  

ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.


ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು. ನಾನೇ ಉಂಟುಮಾಡಿದೆನು, ನಾನೇ ಹೊರುವೆನು. ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು.


ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು’ ಹೇಳುತ್ತಾನೆ ಎಂಬುದಾಗಿ ತಿಳಿಸಿರಿ.


ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.


ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ “ಹನ್ನಾ, ಏಕೆ ಅಳುತ್ತೀ? ಊಟ ಮಾಡದಿರುವುದಕ್ಕೆ ಕಾರಣವೇನು? ನೀನು ವ್ಯಸನಪಡುವುದೇಕೆ? ನಾನು ನಿನಗೆ ಹತ್ತು ಮಂದಿ ಗಂಡು ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ” ಅಂದನು.


ಯೋಸೇಫನು ತನ್ನ ತಂದೆಗೂ, ಅಣ್ಣತಮ್ಮಂದಿರಿಗೂ, ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.


ನವೊಮಿಯೇ ಆ ಮಗುವನ್ನು ಮಡಿಲಲ್ಲಿಟ್ಟುಕೊಂಡು ಸಾಕುತ್ತಿದ್ದಳು.


ಹೊಟ್ಟೆತುಂಬಾ ಊಟಮಾಡುತ್ತಿದ್ದವರು ಅನ್ನಕ್ಕೋಸ್ಕರ ಕೂಲಿಮಾಡುತ್ತಾರೆ; ಹಸಿದವರು ಉಂಡು ಸುಖದಿಂದಿರುತ್ತಾರೆ. ಬಂಜೆಯು ಏಳು ಮಂದಿ ಮಕ್ಕಳನ್ನು ಹೆರುವಳು; ಮಕ್ಕಳುಳ್ಳವಳು ದಿಕ್ಕಿಲ್ಲದೆ ಹೋಗುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು