ರೂತಳು 4:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ನಿನಗೆ ಹೇಳಬೇಕೆಂದಿರುವುದೇನಂದರೆ ‘ನಿನಗೆ ಅದನ್ನು ಕೊಂಡುಕೊಳ್ಳುವ ಮನಸ್ಸಿದ್ದರೆ ಇಲ್ಲಿ ಕುಳಿತಿರುವ ಊರಿನ ಹಿರಿಯರ ಮುಂದೆಯೇ ಕೊಂಡುಕೋ.’ ಇಲ್ಲದಿದ್ದರೆ ನನಗೆ ತಿಳಿಸು; ಇದು ನನಗೆ ಗೊತ್ತಾಗಬೇಕು. ನೀನೂ, ನಿನ್ನ ತರುವಾಯ ನಾನೂ ಅಲ್ಲದೆ ಅದನ್ನು ಕೊಂಡುಕೊಳ್ಳತಕ್ಕ ಬಾಧ್ಯರು ಬೇರೆ ಯಾರೂ ಇಲ್ಲ” ಎಂದು ಹೇಳಲು ಅವನು “ನಾನೇ ಕೊಂಡುಕೊಳ್ಳುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ಹೊಲವನ್ನು ಕೊಂಡುಕೊಳ್ಳಲು ನಿನಗೆ ಮನಸ್ಸಿದ್ದರೆ ಇಲ್ಲಿ ಕುಳಿತಿರುವ ಹಿರಿಯರ ಮುಂದೆ ಕೊಂಡುಕೊಳ್ಳುವ ಹಕ್ಕು ಮೊದಲು ನಿನಗೆ, ಅನಂತರ ನನಗೆ ಸೇರಿದ್ದು; ಬೇರೆಯವರಿಗಲ್ಲ,” ಎಂದನು. ಆಗ ಆ ವ್ಯಕ್ತಿ: “ನಾನೇ ಕೊಂಡುಕೊಳ್ಳುತ್ತೇನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿನಗೆ ಅದನ್ನು ಕೊಂಡುಕೊಳ್ಳುವ ಮನಸ್ಸಿದ್ದರೆ ಇಲ್ಲಿ ಕೂತಿರುವ ಊರಿನ ಹಿರಿಯರ ಮುಂದೆಯೇ ಕೊಂಡುಕೋ. ಇಲ್ಲದಿದ್ದರೆ ನನಗೆ ತಿಳಿಸು; ನನಗೆ ಗೊತ್ತಾಗಬೇಕು. ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಅದನ್ನು ಕೊಂಡುಕೊಳ್ಳತಕ್ಕ ಬಾಧ್ಯರು ಬೇರೆ ಯಾರೂ ಇಲ್ಲ ಎಂದು ಹೇಳಲು ಅವನು - ನಾನೇ ಕೊಂಡುಕೊಳ್ಳುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾನು ಇದರ ಬಗ್ಗೆ ನಿನಗೆ ಈ ಜನರ ಸಮ್ಮುಖದಲ್ಲಿ ಮತ್ತು ನಮ್ಮ ಹಿರಿಯರ ಸಮ್ಮುಖದಲ್ಲಿ ಹೇಳಬೇಕೆಂದು ತೀರ್ಮಾನಿಸಿದ್ದೇನೆ. ನೀನು ಆ ಹೊಲವನ್ನು ಕೊಂಡುಕೊಳ್ಳ ಬಯಸಿದರೆ ಕೊಂಡುಕೋ. ನಿನಗೆ ಕೊಂಡುಕೊಳ್ಳಲು ಇಷ್ಟವಿಲ್ಲದಿದ್ದರೆ ನನಗೆ ಹೇಳು. ನಿನ್ನ ಬಳಿಕ ಆ ಹೊಲವನ್ನು ಕೊಂಡುಕೊಳ್ಳುವ ಹಕ್ಕು ನನಗಿದೆ. ನೀನು ಆ ಹೊಲವನ್ನು ಕೊಂಡುಕೊಳ್ಳದಿದ್ದರೆ ನಾನು ಕೊಂಡುಕೊಳ್ಳುತ್ತೇನೆ.” ಅದಕ್ಕೆ ಅವನು, “ಸರಿ, ನಾನೇ ಕೊಂಡುಕೊಳ್ಳುತ್ತೇನೆ.” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ. ಬಿಡಿಸಿಕೊಳ್ಳದಿದ್ದರೆ ನಾನು ತಿಳಿದುಕೊಳ್ಳುವ ಹಾಗೆ ನನಗೆ ಹೇಳು. ಏಕೆಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ,” ಎಂದು ಹೇಳಿದನು. ಅದಕ್ಕೆ ಅವನು, “ನಾನು ಬಿಡಿಸಿಕೊಳ್ಳುವೆನು,” ಎಂದನು. ಅಧ್ಯಾಯವನ್ನು ನೋಡಿ |