ರೂತಳು 4:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಬೋವಜನು “ನೀನು ನವೊಮಿಯಿಂದ ಆ ಹೊಲವನ್ನು ತೆಗೆದುಕೊಳ್ಳುವ ದಿನದಲ್ಲಿ, ಹೊಲದ ಖಾತೆಯೂ ಆಕೆಯ ಸತ್ತುಹೋದ ಮಗನ ಹೆಸರಿನಲ್ಲೇ ಉಳಿಯುದಿರುವಂತೆ, ಅವನ ಹೆಂಡತಿ ಮೋವಾಬ್ಯಳಾದ ರೂತಳನ್ನೂ ತೆಗೆದುಕೊಳ್ಳಬೇಕು” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಬೋವಜನು, “ನೀನು ಆ ಹೊಲವನ್ನು ಕೊಂಡುಕೊಳ್ಳುವುದಾದರೆ, ಅವಳ ಸೊಸೆಯಾದ ಮೋವಾಬದ ರೂತಳನ್ನು ನೀನು ಮದುವೆಯಾಗಬೇಕು. ಆಗ ಆ ಹೊಲದ ಖಾತೆ ಗತಿಸಿದ ಮಗನ ಹೆಸರಿನಲ್ಲೇ ಉಳಿಯುತ್ತದೆ,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಬೋವಜನು - ನೀನು ನೊವೊವಿುಯಿಂದ ಆ ಹೊಲವನ್ನು ತೆಗೆದುಕೊಳ್ಳುವ ದಿನದಲ್ಲಿ ಹೊಲದ ಖಾತೆಯು ಆಕೆಯ ಸತ್ತುಹೋದ ಮಗನ ಹೆಸರಿನಲ್ಲೇ ಉಳಿಯುವಂತೆ ಅವನ ಹೆಂಡತಿಯೂ ಮೋವಾಬ್ ಸ್ತ್ರೀಯೂ ಆದ ರೂತಳನ್ನೂ ತೆಗೆದುಕೊಳ್ಳಬೇಕು ಎಂದು ತಿಳಿಸಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅದಕ್ಕೆ ಬೋವಜನು, “ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡುಕೊಂಡರೆ ಸತ್ತವನ ಹೆಂಡತಿಯೂ ಮೋವಾಬ್ಯಳೂ ಆಗಿರುವ ರೂತಳನ್ನು ಸಹ ನೀನು ಮದುವೆಯಾಗಬೇಕು. ರೂತಳಿಗೆ ಜನಿಸುವ ಮಗನು ಆ ಹೊಲಕ್ಕೆ ಹಕ್ಕುದಾರನಾಗುವನು. ಹೀಗೆ ಈ ಭೂಮಿಯು ಸತ್ತು ಹೋದವನ ಕುಟುಂಬದಲ್ಲಿಯೇ ಇದ್ದು ಅವನ ಹೆಸರಿನಲ್ಲಿಯೇ ಮುಂದುವರಿಯುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಬೋವಜನು, “ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡುಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ತೆಗೆದುಕೊಳ್ಳಬೇಕು,” ಎಂದನು. ಅಧ್ಯಾಯವನ್ನು ನೋಡಿ |