ರೂತಳು 4:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದಕ್ಕೆ ಆ ಸಮೀಪಬಂಧುವು “ಹಾಗಾದರೆ ಅದನ್ನು ಕೊಂಡುಕೊಂಡು ನನ್ನ ಆಸ್ತಿಯನ್ನು ನಷ್ಟಪಡಿಸಿಕೊಳ್ಳಲಾರೆನು; ಆ ಬಾಧ್ಯತೆಯನ್ನು ನೀನೇ ವಹಿಸಿಕೋ; ನನ್ನಿಂದಾಗದು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದಕ್ಕೆ ಆ ವ್ಯಕ್ತಿ, “ಹಾಗಾದರೆ ಹೊಲವನ್ನು ಕೊಂಡುಕೊಳ್ಳುವ ಹಕ್ಕನ್ನು ನಾನು ಬಿಟ್ಟುಕೊಡುತ್ತೇನೆ. ಇಲ್ಲದಿದ್ದರೆ ನನ್ನ ಕುಟುಂಬಕ್ಕೆ ಸೇರಿರುವ ಆಸ್ತಿಗೆ ನಷ್ಟವಾಗುತ್ತದೆ. ಆದ್ದರಿಂದ ಆ ಹಕ್ಕನ್ನು ನೀನೇ ವಹಿಸಿಕೋ, ನನ್ನಿಂದಾಗದು,” ಎಂದುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆ ಸಮೀಪಬಂಧುವು - ಹಾಗಾದರೆ ಅದನ್ನು ಕೊಂಡುಕೊಂಡು ನನ್ನ ಆಸ್ತಿಯನ್ನು ನಷ್ಟಪಡಿಸಿಕೊಳ್ಳಲಾರೆನು; ಆ ಬಾಧ್ಯತೆಯನ್ನು ನೀನೇ ವಹಿಸಿಕೋ; ನನ್ನಿಂದಾಗದು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅದಕ್ಕೆ ಆ ಸಮೀಪಬಂಧುವು, “ನಾನು ಆ ಹೊಲವನ್ನು ಕೊಂಡುಕೊಳ್ಳಲಾರೆ. ಆ ಹೊಲ ನನಗೆ ಸೇರಬೇಕಾದರೂ ನಾನು ಅದನ್ನು ಕೊಂಡುಕೊಳ್ಳಲಾರೆ. ಒಂದುವೇಳೆ ನಾನು ಅದನ್ನು ಕೊಂಡುಕೊಂಡರೆ ನನ್ನ ಸ್ವಂತ ಹೊಲವನ್ನೇ ಕಳೆದುಕೊಳ್ಳಬೇಕಾಗುವುದು. ಆದ್ದರಿಂದ ನೀನೇ ಆ ಹೊಲವನ್ನು ಕೊಂಡುಕೊಳ್ಳಬಹುದು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅದಕ್ಕೆ ಆ ಬಂಧುವು, “ನಾನು ನನ್ನ ಬಾಧ್ಯತೆಯನ್ನು ನಷ್ಟಪಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು. ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ; ಏಕೆಂದರೆ ನಾನು ಬಿಡಿಸಿಕೊಳ್ಳಲಾರೆನು,” ಎಂದನು. ಅಧ್ಯಾಯವನ್ನು ನೋಡಿ |