Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ಪ್ರಾರ್ಥನೆ ಮಾಡುವಾಗಲೆಲ್ಲಾ ತಪ್ಪದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತಾ ಇನ್ನು ಮೇಲಾದರೂ ನಿಮ್ಮ ಬಳಿಗೆ ಬರುವುದಕ್ಕೆ ದೇವರ ಚಿತ್ತದಿಂದ ನನಗೆ ಯಾವ ರೀತಿಯಲ್ಲಾದರೂ ಅನುಕೂಲವಾಗಬೇಕೆಂದು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಪ್ನಾಚ್ಯಾ ಬರ್‍ಯಾ ಮನಾನ್ ಅತ್ತಾ ತರ್‍ಬಿ ತುಮ್ಕಾ ಯೆವ್ನ್ ಭೆಟ್ತಲೊ ಎಕ್ ಅವ್ಕಾಸ್ ದೆವ್ ಮಾಕಾ ಕರುನ್ ದಿಂವ್ದಿತ್ ಮನುನ್ ಮಿಯಾ ಮಾಗ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:10
15 ತಿಳಿವುಗಳ ಹೋಲಿಕೆ  

“ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,


ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು “ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು” ಎಂದು ಹೇಳಬೇಕು.


ಇದಲ್ಲದೆ ದೇವರು ನಿಮ್ಮ ಪ್ರಾರ್ಥನೆಗಳನ್ನು ಕೇಳಿ ನಾನು ನಿಮ್ಮ ಬಳಿಗೆ ಬರುವುದಕ್ಕೆ ಕೃಪೆ ಮಾಡುವನೆಂಬ ನಿರೀಕ್ಷೆ ನನಗುಂಟು. ಆದಕಾರಣ ನಾನು ಉಳಿದುಕೊಳ್ಳಲು ಒಂದು ಕೊಠಡಿಯನ್ನು ಸಿದ್ಧಪಡಿಸು.


ಯಾಕೆಂದರೆ ನಿಮ್ಮ ಬಳಿಗೆ ಬರುವುದಕ್ಕೆ ನಮಗೆ ಮನಸ್ಸಿತ್ತು. ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವುದಕ್ಕೆ ಪ್ರಯತ್ನ ಮಾಡಿದ್ದೆನು. ಆದರೆ ಸೈತಾನನು ನನಗೆ ಅಡ್ಡಿ ಮಾಡಿದನು.


ಮತ್ತು ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರುಗಿ ಬರುವಂತೆ ನೀವು ಪ್ರಾರ್ಥಿಸಬೇಕೆಂದು ನಾನು ನಿಮ್ಮನ್ನು ಬಹಳವಾಗಿ ಕೇಳಿಕೊಳ್ಳುತ್ತೇನೆ.


ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.


ಆದರೆ ಕರ್ತನ ಚಿತ್ತವಾದರೆ ನಾನು ಬೇಗನೆ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನು ಮಾತ್ರವಲ್ಲ ಅವರ ಬಲವನ್ನು ಕಂಡುಹಿಡಿಯುತ್ತೇನೆ.


ಅವನು ಒಪ್ಪದೆ ಇದ್ದುದರಿಂದ; “ಕರ್ತನ ಚಿತ್ತದಂತೆ ಆಗಲಿ” ಎಂದು ಹೇಳಿ ನಾವು ಸುಮ್ಮನಾದೆವು.


ಇದಲ್ಲದೆ ನಿಮ್ಮ ಬಳಿಗೆ ಬರುವಾಗ ಕ್ರಿಸ್ತನಿಂದಾಗುವ ಆಶೀರ್ವಾದಗಳನ್ನು ಹೇರಳವಾಗಿ ತರುವೆನೆಂದು ಬಲ್ಲೆನು.


ದೇವರ ಚಿತ್ತದಂತೆ ಯೇಸು ಕ್ರಿಸ್ತನಿಂದ ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟ ಪೌಲನೂ ಮತ್ತು ನಮ್ಮ ಸಹೋದರನಾದ ಸೊಸ್ಥೆನನೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು