Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮಾನವರ ಎಲ್ಲಾ ಪಾಪಾಕ್ರಮಗಳ ಮೇಲೆ ದೇವರ ಕೋಪಾಗ್ನಿ ಸ್ವರ್ಗದಿಂದ ಎರಗುವುದೆಂದು ಪ್ರಕಟವಾಗುತ್ತಿದೆ. ಏಕೆಂದರೆ, ಅವರ ಅಕ್ರಮ ನಡತೆ ಸತ್ಯವನ್ನು ಅಡಗಿಸುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ದುಷ್ಟತನವನ್ನು ನಡಿಸಿ ಸತ್ಯವನ್ನು ಅಣಗಿಸುವವರಾದ ಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ತೋರಿಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರ ಕೋಪವು ಪರಲೋಕದಿಂದ ತೋರಿಬಂದಿದೆ. ಜನರು ದೇವರಿಗೆ ವಿರೋಧವಾಗಿ ಮಾಡುವ ಎಲ್ಲಾ ಕೆಟ್ಟ ಮತ್ತು ದುಷ್ಕೃತ್ಯಗಳ ಬಗ್ಗೆ ದೇವರು ಕೋಪ ಉಳ್ಳವನಾಗಿದ್ದಾನೆ. ಅವರಿಗೆ ಸತ್ಯವು ತಿಳಿದಿದೆ, ಆದರೆ ಅವರು ತಮ್ಮ ದುಷ್ಟಜೀವಿತಗಳಿಂದ ಸತ್ಯವನ್ನು ಅಡಗಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದುಷ್ಟತನದಿಂದ ಸತ್ಯವನ್ನು ಅಡಗಿಸುವವರಾದ ಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆ ಹಾಗೂ ದುಷ್ಟತನದ ಮೇಲೆ ದೇವರ ರೌದ್ರವು ಪರಲೋಕದಿಂದ ಪ್ರಕಟವಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಬುರ್ಶ್ಯಾಪಾನಾನ್ ಖರೆಪಾನಾಕ್ ಅಡ್ಕಳ್ ಹೊತಲ್ಯಾ ಸಗ್ಳ್ಯಾ ಬುರ್ಶ್ಯಾ ಮಾನ್ಸಾಂಚ್ಯಾ ಸಗ್ಳ್ಯಾ ಪಾಪಾ ಅನಿ ವಾಯ್ಟಾಚ್ಯಾ ವರ್‍ತಿ ದೆವಾಚೊ ರಾಗ್ ಸರ್‍ಗಾ ವೈನಾ ಉತ್ರುನ್ ಯೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:18
19 ತಿಳಿವುಗಳ ಹೋಲಿಕೆ  

ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.


ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.


ಇವುಗಳ ನಿಮಿತ್ತ ಅವಿಧೇಯರಾಗುವವರ ಮೇಲೆ ದೇವರ ಕೋಪವು ಉಂಟಾಗುತ್ತದೆ.


ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.


ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.


ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?


ಯಾಕೆಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು, ಆದರೆ ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ.


ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.


ಇದನ್ನು ಪರಿಗಣಿಸು ಎಲೈ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ?


ಯಾಕೆಂದರೆ ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದಿದೆ. ಅದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿರುವನು.


ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.


ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ.


ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.


ಇದಲ್ಲದೆ ಅವನು ನೇಮಕವಾದ ಸಮಯದಲ್ಲೇ ಹೊರತು ಬಯಲಿಗೆ ಬರುವುದಕ್ಕೆ ಏನು ಅಡ್ಡಿ ಮಾಡುತ್ತದೋ ಅದು ನಿಮಗೆ ತಿಳಿದೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು