Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವರು ಸುಳ್ಳುಸುದ್ದಿ ಹಬ್ಬಿಸುವವರೂ, ಚಾಡಿಹೇಳುವವರೂ, ದೇವರನ್ನು ದ್ವೇಷಿಸುವವರೂ, ಸೊಕ್ಕಿನವರೂ, ಅಹಂಕಾರಿಗಳೂ, ಬಡಾಯಿಕೊಚ್ಚುವವರೂ, ಕೇಡನ್ನು ಕಲ್ಪಿಸುವವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವರು ಹರಟೆಮಲ್ಲರು, ಚಾಡಿಕೋರರು, ದೇವದ್ರೋಹಿಗಳು, ಗರ್ವಿಗಳು, ಅಹಂಕಾರಿಗಳು, ಜಂಭಕೊಚ್ಚಿಕೊಳ್ಳುವವರು, ಕೇಡುಬಗೆಯುವವರು, ತಂದೆತಾಯಿಗಳಿಗೆ ಅವಿಧೇಯರು ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವರು ಕಿವಿ ಊದುವವರೂ ಚಾಡಿಹೇಳುವವರೂ ದೇವರನ್ನು ದ್ವೇಷಿಸುವವರೂ ಸೊಕ್ಕಿನವರೂ ಅಹಂಕಾರಿಗಳೂ ಬಡಾಯಿಕೊಚ್ಚುವವರೂ ಕೇಡನ್ನು ಕಲ್ಪಿಸುವವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಒಬ್ಬರ ಮೇಲೊಬ್ಬರು ಚಾಡಿ ಹೇಳುತ್ತಾರೆ; ದೇವರನ್ನು ದ್ವೇಷಿಸುತ್ತಾರೆ. ಅವರು ಸೊಕ್ಕಿನವರೂ ಅಹಂಕಾರಿಗಳೂ ಮತ್ತು ತಮ್ಮ ಬಗ್ಗೆ ಬಡಾಯಿಕೊಚ್ಚಿಕೊಳ್ಳುವವರೂ ಆಗಿದ್ದಾರೆ. ಅವರು ಕೇಡಿನ ಮಾರ್ಗಗಳನ್ನು ಹುಡುಕುವವರೂ ತಂದೆತಾಯಿಗಳಿಗೆ ಅವಿಧೇಯರೂ ಮೂರ್ಖರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅವರು ಕಿವಿ ಊದುವವರೂ ಚಾಡಿಹೇಳುವವರೂ ದೇವರನ್ನು ದ್ವೇಷಿಸುವವರೂ ಸೊಕ್ಕಿನವರೂ ಅಹಂಕಾರಿಗಳೂ ಬಡಾಯಿ ಕೊಚ್ಚುವವರೂ ಕೇಡನ್ನು ಕಲ್ಪಿಸುವವರೂ ತಂದೆತಾಯಿಗಳ ಮಾತನ್ನು ಕೇಳದವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಅನಿ ಎಕಾಮೆಕಾಚ್ಯಾ ವಿಶಯಾತ್ ಬುರ್ಶ್ಯಾ ಗೊಸ್ಟಿಯಾ ಬೊಲ್ತ್ಯಾತ್; ತೆನಿ ದೆವಾಚೊ ದ್ವೆಶ್ ಕರ್‍ತಲೆ; ಮಸ್ತಿಚೆ, ಗರುಕಿಚೆ, ಬಡಾಯ್ ಬೊಲ್ತಲೆ, ತೆನಿ ಕನ್ನಾಬಿ ಬುರ್ಶೆಚ್ ಯವಜ್ತಲೆ, ತೆನಿ ತೆಂಚ್ಯಾ ಬಾಯ್-ಬಾಬಾಕ್ ಮಾನ್ ದಿನ್ಯಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:30
42 ತಿಳಿವುಗಳ ಹೋಲಿಕೆ  

ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,


ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.


ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.


ಆದರೆ ನೀವು ನಿಮ್ಮ ಅಹಂನಿಂದ ಹೊಗಳಿಕೊಳ್ಳುತ್ತೀರಿ. ಅಂಥ ಹೊಗಳಿಕೆಯೆಲ್ಲಾ ಕೆಟ್ಟದ್ದೇ.


ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ.


ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.


ನಾವು ಮಿತಿಗಳನ್ನು ಮೀರಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತೆಗೆದುಕೊಂಡು, ಇವು ನಮ್ಮವು ಎಂದು ಹಿಗ್ಗುವವರಲ್ಲ. ಆದರೆ ನಿಮ್ಮ ನಂಬಿಕೆಯು ಹೆಚ್ಚಿದಾಗೆಲ್ಲಾ ನಿಮ್ಮ ಮೂಲಕ ನಮ್ಮ ಮಿತಿಯು ಇನ್ನೂ ವಿಸ್ತರಿಸಿತು.


ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.


ಧರ್ಮಶಾಸ್ತ್ರದಲ್ಲಿ ಹೆಮ್ಮೆಯಿಂದ ಹೆಚ್ಚಳಪಡುವ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದು ದೇವರನ್ನು ಅವಮಾನಪಡಿಸುತ್ತೀಯೋ?


ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ,


ಇದಕ್ಕಿಂತ ಮೊದಲು ಥೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.


ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ. ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.


ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.


ಹೇಗೆಂದರೆ ‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ.


ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ.


ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ.


ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.


ಉತ್ತರದ ಗಾಳಿ ಮಳೆ ಬರಮಾಡುವುದು, ಚಾಡಿಯ ನಾಲಿಗೆ ಕೋಪದ ಮುಖ ಮಾಡುವುದು.


ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”


ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು.


ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ, ಕ್ಷಮಿಸುವ ದೇವರಾಗಿದ್ದಿ.


ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.


ಕೆಡುಕರೆಲ್ಲರು ಉಬ್ಬಿಕೊಂಡು, ಅಹಂಕಾರವನ್ನು ಕಕ್ಕುತ್ತಾರೆ.


ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು.


ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು.


ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ.


ಅಹಹ! ಎದೋಮ್ಯರನ್ನು ಸೋಲಿಸಿ ಬಹಳ ಕೀರ್ತಿಯನ್ನು ಪಡಕೊಂಡೆ, ಎಂದು ನೀನು ಹೆಮ್ಮೆಪಡುತಿರುವೆ; ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೇ? ನನ್ನನ್ನು ಕೆಣಕಿ ನಿನಗೂ ನಿನ್ನ ಯೆಹೂದ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ” ಎಂದು ಉತ್ತರಕೊಟ್ಟನು.


ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, “ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.


ಇಸ್ರಾಯೇಲರ ಅರಸನು ಬಂದ ದೂತರಿಗೆ, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು, ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ” ಎಂದನು.


“ಲೇವಿಯರು, ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆ ಮಾಡುವವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯಿತೀರಿಸುವನು.


ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ, “ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ” ಎಂದು ಹೇಳುವನು.


ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.


ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ.


ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು; ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ.


ಕೇಡನ್ನು ಕಲ್ಪಿಸುವವನು, ಕುಯುಕ್ತಿಯುಳ್ಳವನು ಎನಿಸಿಕೊಳ್ಳುವನು.


ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು.


ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು