Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪ್ರಭುವಿನಲ್ಲಿ ವಿಶ್ವಾಸವಿಲ್ಲದಿದ್ದರೆ ಅವರ ನಾಮಸ್ಮರಣೆ ಮಾಡುವುದಾದರೂ ಹೇಗೆ? ಅವರ ವಿಷಯವನ್ನು ಕುರಿತು ಕೇಳದಿದ್ದರೆ ಅವರನ್ನು ವಿಶ್ವಾಸಿಸುವುದಾದರೂ ಹೇಗೆ? ಬೋಧಿಸುವವರು ಇಲ್ಲದಿದ್ದರೆ ಅವರ ವಿಷಯವನ್ನು ಕುರಿತು ಕೇಳುವುದಾದರೂ ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ತಾವು ಯಾವನನ್ನು ನಂಬಲಿಲ್ಲವೋ ಆತನ ನಾಮವನ್ನು ಹೇಳಿಕೊಳ್ಳುವದು ಹೇಗೆ? ಮತ್ತು ಆತನ ಸುದ್ದಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ? ಸಾರುವವರು ಕಳುಹಿಸಲ್ಪಡದೆ ಸಾರುವದೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪ್ರಭುವಿನಲ್ಲಿ ನಂಬಿಕೆಯಿಲ್ಲದೆ ಆತನಲ್ಲಿ ಭರವಸೆವಿಡುವುದಾದರೂ ಹೇಗೆ? ಪ್ರಭುವಿನ ವಿಷಯವನ್ನು ಕೇಳದೆ ಆತನಲ್ಲಿ ನಂಬಿಕೆ ಇಡುವುದಾದರೂ ಹೇಗೆ? ಮತ್ತೊಬ್ಬನು ತಿಳಿಸದ ಹೊರತು ಪ್ರಭುವಿನ ಬಗ್ಗೆ ಕೇಳುವುದಾದರೂ ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ, ತಾವು ವಿಶ್ವಾಸವಿಡದ ಕರ್ತನನ್ನು ಕರೆಯುವುದಾದರೂ ಹೇಗೆ? ತಾವು ಕೇಳದ ಕರ್ತನ ಬಗ್ಗೆ ಅವರು ವಿಶ್ವಾಸವಿಡುವುದು ಹೇಗೆ? ಕರ್ತನ ಬಗ್ಗೆ ಸಾರುವವನಿಲ್ಲದೆ ಅವರು ಕೇಳುವುದಾದರೂ ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ತೆನಿ ತೆಚ್ಯಾ ವರ್‍ತಿ ವಿಶ್ವಾಸುಚ್ ಕರಲ್ಲೊ ನಸ್ಲ್ಯಾರ್ ಮಜತ್ ಕರುಕ್ ಕಶೆ ಬಲ್ವುಕ್ ಹೊತಾ? ಅನಿ ತೆನಿ ದೆವಾಚಿ ಬಾತ್ಮಿಚ್ ಆಯ್ಕಲ್ಲಿ ನಸ್ಲ್ಯಾರ್ ವಿಶ್ವಾಸ್ ತರ್ ಕಶೆ ಕರುಕ್ ಹೊತಾ? ಬಾತ್ಮಿಚ್ ಸಾಂಗುನ್ ಹೊಲ್ಲಿ ನಸ್ಲ್ಯಾರ್ ತೆನಿ ಆಯಿಕ್ತಲೆ ಕಶೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:14
22 ತಿಳಿವುಗಳ ಹೋಲಿಕೆ  

ಸುಳ್ಳಾಡದ ದೇವರು, ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು, ತಾನು ಆರಿಸಿಕೊಂಡವರ ನಂಬಿಕೆಯನ್ನು ಮತ್ತು ದೈವ ಭಕ್ತಿಯನ್ನು ಸತ್ಯದ ಜ್ಞಾನಕ್ಕನುಸಾರವಾಗಿ ದೃಢಪಡಿಸಲು ನಾನು ಕಾರ್ಯ ನಿರ್ವಹಿಸುತ್ತೇನೆ.


ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.


ಅದಕ್ಕೆ ಅವನು, “ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?” ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು.


ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ಆತನಿಂದಲೇ ಕೇಳಿ ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ.


ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.


“ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ?” ಎಂದು ಅವರನ್ನು ಕೇಳಲು ಅವರು ಅವನಿಗೆ; “ಇಲ್ಲ, ಪವಿತ್ರಾತ್ಮವರವು ಉಂಟೆಂಬುದನ್ನೇ ನಾವು ಕೇಳಿಲ್ಲ” ಅಂದರು.


ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ತಮೇಲೆ ಜೀವಿತನಾಗಿ ಎದ್ದು ಬಂದು ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.


ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳವಾಗಿ ಭಯಪಟ್ಟು, ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು.


ಆಗ ನಾವಿಕರು ಹೆದರಿ ತಮ್ಮತಮ್ಮ ದೇವರುಗಳಿಗೆ ಮೊರೆಯಿಟ್ಟರು. ಹಡಗನ್ನು ಹಗುರ ಮಾಡಲು ಹಡಗಿನಲ್ಲಿರುವ ಸರಕುಗಳನ್ನು ಸಮುದ್ರಕ್ಕೆ ಬಿಸಾಡಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಮಲಗಿ ಗಾಢನಿದ್ರೆ ಮಾಡುತ್ತಿದ್ದನು.


ಅದಕ್ಕೆ ಅವನು, “ಕರ್ತನೇ ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು, ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದಾಗ,


ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು.


ಮತ್ತು “ಇದು ಸಮುದ್ರದ ಆಚೆ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡುಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.


ಅವರು ಅವನಿಗೆ, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ’ ಎಂದರು, ಆಗ ಅವನು ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ’ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು