Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇಂತಿರಲು, ಶುಭಸಂದೇಶವನ್ನು ಆಲಿಸುವುದರಿಂದ ವಿಶ್ವಾಸ ಮೂಡುತ್ತದೆ; ಶುಭಸಂದೇಶ ಕ್ರಿಸ್ತಯೇಸುವನ್ನು ಬೋಧಿಸುವುದರ ಮೂಲಕ ಪ್ರಕಟವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದಕಾರಣ ಸಾರಿದ ವಾರ್ತೆಯು ನಂಬಿಕೆಗೆ ಆಧಾರ, ಆ ವಾರ್ತೆಗೆ ಕ್ರಿಸ್ತನ ವಾಕ್ಯವೇ ಆಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಹೀಗಿರಲು, ಸುವಾರ್ತೆಯನ್ನು ಕೇಳುವುದರ ಮೂಲಕ ನಂಬಿಕೆ ಬರುತ್ತದೆ. ಕ್ರಿಸ್ತನ ಬಗ್ಗೆ ಹೇಳುವುದರ ಮೂಲಕ ಸುವಾರ್ತೆ ಪ್ರಕಟವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದಕಾರಣ, ತಕ್ಕ ವಾಕ್ಯವನ್ನು ಕೇಳುವುದರಿಂದಲೇ ವಿಶ್ವಾಸವು ಬರುತ್ತದೆ, ಅದು ಕ್ರಿಸ್ತನ ವಾಕ್ಯವನ್ನು ಕೇಳುವುದರಿಂದಲೇ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅಶೆ ರ್‍ಹಾತಾನಾ, ಬರಿ ಖಬರ್ ಆಯ್ಕಲ್ಲ್ಯಾ ವೈನಾ ವಿಶ್ವಾಸ್ ಯೆತಾ, ಅನಿ ಬಾತ್ಮಿ ಕ್ರಿಸ್ತಾಚ್ಯಾ ವಿಶಯಾತ್ ಬಾತ್ಮಿ ಸಾಂಗ್ತಲ್ಯಾ ವೈನಾ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:17
24 ತಿಳಿವುಗಳ ಹೋಲಿಕೆ  

ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ?


ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.


ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.


ಮತ್ತು ಆತನು ಅವರಿಗೆ; “ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು.


ಆತನು ಅವರಿಗೆ, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ” ಎಂದು ಉತ್ತರಕೊಟ್ಟನು.


ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.


ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?


ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು.


ಈ ಸಾಮ್ಯದ ಅರ್ಥವೇನಂದರೆ, ಆ ಬೀಜವೆಂದರೆ ದೇವರ ವಾಕ್ಯ.


ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು, ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು.


ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ.


ಆ ಇಬ್ಬರು ಶಿಷ್ಯರು ಯೋಹಾನನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು