ರೋಮಾಪುರದವರಿಗೆ 10:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದರೆ “ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳಿದುಕೊಳ್ಳಲಿಲ್ಲವೇನು” ಎಂದು ಹೇಳುತ್ತೇನೆ. ಈ ವಿಷಯದಲ್ಲಿ, “ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಅಸೂಯೆ ಹುಟ್ಟುವಂತೆ ಪ್ರೆರೇಪಿಸುತ್ತೇನೆ; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ರೊಚ್ಚಿಗೆಬ್ಬಿಸುವೆನು” ಎಂದು ಮೊದಲು ಮೋಶೆಯು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹಾಗೆಂದ ಮೇಲೆ ಇಸ್ರಯೇಲರು ಆ ಶುಭಸಂದೇಶವನ್ನು ಅರ್ಥಮಾಡಿಕೊಳ್ಳಲಿಲ್ಲ. ಎನ್ನೋಣವೆ? ಮೊದಲನೆಯದಾಗಿ, ಮೋಶೆಯ ಮಾತಿನಲ್ಲಿ ಉತ್ತರಿಸುವುದಾದರೆ: “ ‘ಜನಾಂಗ’ ಎನಿಸಿಕೊಳ್ಳದವರನ್ನು ನೋಡಿ ನೀವು ಅಸೂಯೆಪಡುವಂತೆ ಮಾಡುತ್ತೇನೆ; ಮತಿಹೀನರೆನಿಸಿಕೊಂಡ ಜನಾಂಗವನ್ನು ನೋಡಿ ನೀವು ಕೆರಳುವಂತೆ ಮಾಡುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆದರೆ ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳುಕೊಳ್ಳಲಿಲ್ಲವೇನು ಎಂದು ಕೇಳುತ್ತೇನೆ. ಈ ವಿಷಯದಲ್ಲಿ - ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡುಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಇಸ್ರೇಲಿನ ಜನರು ಅರ್ಥಮಾಡಿಕೊಳ್ಳಲಿಲ್ಲವೇ?” ಎಂದು ನಾನು ಮತ್ತೆ ಕೇಳುತ್ತೇನೆ. ಹೌದು, ಅವರು ಅರ್ಥಮಾಡಿಕೊಂಡರು. ಮೊದಲನೆಯದಾಗಿ, ದೇವರು ಮೋಶೆಯ ಮೂಲಕ ಹೀಗೆ ತಿಳಿಸಿದ್ದಾನೆ: “ಜನಾಂಗವೆನಿಸಿಕೊಳ್ಳದವರ ಮೂಲಕ ಹೀಗೆ ನಾನು ನಿಮ್ಮಲ್ಲಿ ಅಸೂಯೆ ಹುಟ್ಟಿಸುವೆನು. ಬುದ್ದಿಹೀನರೆನಿಸಿಕೊಂಡ ಜನಾಂಗದ ಮೂಲಕ ನಾನು ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದರೆ ಇಸ್ರಾಯೇಲರಿಗೆ ಅರ್ಥವಾಗಲಿಲ್ಲವೇ? ಎಂದು ನಾನು ಪ್ರಶ್ನಿಸುತ್ತೇನೆ. ಮೊದಲನೆಯದಾಗಿ ಮೋಶೆಯು, “ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ತಿಳುವಳಿಕೆಯಿಲ್ಲದ ಜನಾಂಗದವರ ಮೂಲಕ ನೀವು ಕೋಪಗೊಳ್ಳುವಂತೆ ಮಾಡುವೆನು,” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಅನಿ ಪರ್ತುನ್ ಮಿಯಾ ಇಚಾರ್ತಾ: ಇಸ್ರಾಯೆಲಾಚ್ಯಾ ಲೊಕಾಕ್ನಿ ಹೆ ಕಳುಕ್ ನಾ ಅಶಿಲ್ ಕಾಯ್? ಮೊಯ್ಜೆ ಅಪ್ನಿಚ್ ಅದ್ದಿ ಜಬಾಬ್ ದಿತಾ, ಮಾಜ್ಯಾ ಲೊಕಾಂಚ್ಯಾ ಪೊಟಾತ್ನಿ ಝಳ್ ಪಡಿ ಸರ್ಕೆ ಕರುಕ್ ಮಿಯಾ ದುಸ್ರ್ಯಾ ದೆಶಾಕ್ನಿ ವಾಪರ್‍ತಾ; ಅನಿ ಪಿಶ್ಯಾಂಚ್ಯಾ ಎಕ್ ದೆಸಾಕ್ ಲಾಗುನ್ ಮಿಯಾ ಮಾಜ್ಯಾ ಲೊಕಾಕ್ನಿ ರಾಗ್ ಯೆಯ್ ಸರ್ಕೆ ಕರ್‍ತಾ. ಅಧ್ಯಾಯವನ್ನು ನೋಡಿ |