Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೇವರ ವಿಷಯದಲ್ಲಿ ಅವರು ಬಹಳ ನಿಷ್ಠಾವಂತರು ಎಂದು ಒತ್ತಿಹೇಳಬಲ್ಲೆ. ಆದರೆ ಆ ನಿಷ್ಠೆ ನೈಜಜ್ಞಾನವನ್ನು ಆಧರಿಸಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿ ಜ್ಞಾನಾನುಸಾರವಾದದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಯೆಹೂದ್ಯರ ಬಗ್ಗೆ ಹೀಗೆ ಹೇಳಬಲ್ಲೆನು: ಅವರು ದೇವರನ್ನು ಹಿಂಬಾಲಿಸಲು ನಿಜವಾಗಿಯೂ ಪ್ರಯತ್ನಿಸುತ್ತಾರೆ. ಆದರೆ ಅವರಿಗೆ ಸರಿಯಾದ ಮಾರ್ಗ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ದೇವರಿಗಾಗಿ ಆಸಕ್ತರು ಎಂಬುದಾಗಿ ನಾನು ಸಾಕ್ಷಿಕೊಡುತ್ತೇನೆ. ಆದರೆ ಅವರ ಆಸಕ್ತಿಯು ಜ್ಞಾನಕ್ಕೆ ಅನುಸಾರವಾದದ್ದು ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮಿಯಾ ತುಮ್ಕಾ ಖರೆಚ್ ಸಾಂಗ್ತಾ ತೆಂಚಿ ಭಕ್ತಿ ದೆವಾ ವರ್‍ತಿ ಲೈ ಘಟ್ ಹಾಯ್, ಖರೆ ತೆಂಚಿ ಭಕ್ತಿ ಖರ್ಯಾ ಬುದ್ವಂತ್ಕಿ ವರ್‍ತಿ ಠಿಕುನ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:2
22 ತಿಳಿವುಗಳ ಹೋಲಿಕೆ  

ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.


ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತ ಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.


ಮತ್ತು ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.


ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ತಿಳಿವಳಿಕೆಯಿಲ್ಲದೆ ಕೋರುವುದು ಯುಕ್ತವಲ್ಲ, ದುಡುಕುವ ಕಾಲು ದಾರಿತಪ್ಪುವುದು.


ಇದಲ್ಲದೆ ನಾನು ನನ್ನ ಪೂರ್ವಿಕರಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.


ಯೇಹುವು ಅವನಿಗೆ, “ನನ್ನ ಜೊತೆಯಲ್ಲಿ ಬಂದು, ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


“ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.


ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವುದಿಲ್ಲ.


ಅವರು ತಮ್ಮ ಶಕ್ತಿಯನುಸಾರವಾಗಿ ಮಾತ್ರ ಕೊಡದೆ ಶಕ್ತಿಯನ್ನು ಮೀರಿ ತಮ್ಮಿಷ್ಟಕ್ಕೆ ತಾವೇ ಉದಾರವಾಗಿ ದಾನಮಾಡಿದರು.


“ಇಸ್ರಾಯೇಲ್‍ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.


ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ, ಆ ನಿಮ್ಮ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿ ಹೇಳುತ್ತೇನೆ.


ಇವನು ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಮತ್ತು ಹಿರಿಯಾಪೋಲಿಯದವರಿಗಾಗಿಯೂ ಬಹಳ ಪ್ರಯಾಸ ಪಡುತ್ತಾನೆಂದು ನಾನು ಸಾಕ್ಷಿಹೇಳುತ್ತೇನೆ.


ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.


ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.


ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.


ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು