ರೋಮಾಪುರದವರಿಗೆ 10:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, “ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯೆಶಾಯನು ಮತ್ತಷ್ಟು ದಿಟ್ಟತನದಿಂದ ಈ ರೀತಿ ಹೇಳಿದ್ದಾನೆ: “ನನ್ನನ್ನು ಅರಸದವರಿಗೂ ನಾನು ಕಾಣಿಸಿಕೊಂಡೆ ನನ್ನ ಬಗ್ಗೆ ವಿಚಾರಿಸದವರಿಗೂ ನಾನು ಪ್ರತ್ಯಕ್ಷನಾದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತಾಡಿ - ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ವಿಷಯ ವಿಚಾರಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಬಳಿಕ ಯೆಶಾಯನು ದೇವರ ಈ ನುಡಿಯನ್ನು ಧೈರ್ಯವಾಗಿ ಹೇಳಿದ್ದಾನೆ: “ನನ್ನನ್ನು ಹುಡುಕದೆ ಇದ್ದ ಜನರು ನನ್ನನ್ನು ಕಂಡುಕೊಂಡರು. ನನಗಾಗಿ ಕೇಳಿಕೊಳ್ಳದ ಜನರಿಗೆ ನನ್ನನ್ನು ತೋರ್ಪಡಿಸಿಕೊಂಡೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ಯೆಶಾಯನು ಬಹು ಧೈರ್ಯವಾಗಿ, “ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಇಸಾಯಿಯಾ ಅನಿ ಉಲ್ಲೆ ಬರೆ ಕರುನ್ ಸಾಂಗ್ತಾ, ಕೊನ್ ಮಾಜಿ ವಾಟ್ ರಾಕುನ್ಗೆತ್ ನತ್ತೆ, ತೆಂಕಾ ಮಿಯಾ ಗಾವ್ಲೊ; ಜೆ ಕೊನ್ ಮಾಜ್ಯಾ ವಿಶಯಾತ್ ಇಚಾರಿನಸಿತ್ ತೆಂಕಾ ಮಿಯಾ ದಿಸ್ಲೊ! ಅಧ್ಯಾಯವನ್ನು ನೋಡಿ |