ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.
ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ.
ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.
ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.
ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.
ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ” ಎಂಬುದೇ.