Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ನಂಬಿಕೆಯಿಂದುಂಟಾಗುವ ನೀತಿಯು ಈ ರೀತಿಯಾಗಿ ಹೇಳುತ್ತದೆ. “‘ಕ್ರಿಸ್ತನನ್ನು ಭೂಮಿಗಿಳಿಸಿಕೊಂಡು ಬರುವುದಕ್ಕಾಗಿ ಮೇಲಣ ಲೋಕಕ್ಕೆ ಏರಿಹೋದವರಾರು?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ವಿಶ್ವಾಸದ ಮೂಲಕ ದೊರಕುವ ಸತ್ಸಂಬಂಧದ ಬಗ್ಗೆ ಹೀಗೆ ಬರೆಯಲಾಗಿದೆ: “ಕ್ರಿಸ್ತಯೇಸುವನ್ನು ಕೆಳಕ್ಕೆ ಕರೆತರಲು ಸ್ವರ್ಗಕ್ಕೆ ಏರಿಹೋಗುವವರು ಯಾರು?” ಎಂದಾಗಲೀ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ನಂಬಿಕೆಯಿಂದುಂಟಾಗುವ ನೀತಿಯು ಏನು ಹೇಳುತ್ತದೆ? ಕ್ರಿಸ್ತನನ್ನು ಕೆಳಕ್ಕೆ ಕರೆದುಕೊಂಡು ಬರುವದಕ್ಕೆ ಯಾರು ಮೇಲಣ ಲೋಕಕ್ಕೆ ಏರಿಹೋದಾರು? ಎಂದಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ನಂಬಿಕೆಯ ಮೂಲಕ ನೀತಿನಿರ್ಣಯ ಹೊಂದುವುದರ ಬಗ್ಗೆ, “(ಕ್ರಿಸ್ತನನ್ನು ಕೆಳಕ್ಕೆ ಕರೆದುಕೊಂಡು ಬರಲು) ‘ಯಾರು ಪರಲೋಕಕ್ಕೆ ಏರಿಹೋಗಬಲ್ಲರು?’” ಎಂದಾಗಲಿ (ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರಲು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ವಿಶ್ವಾಸದಿಂದ ಬರುವ ನೀತಿಯ ಬಗ್ಗೆ ಮೋಶೆಯು ಹೇಳುವುದೇನೆಂದರೆ: “ ‘ಕ್ರಿಸ್ತನನ್ನು ಕೆಳಗೆ ತರಲು ಪರಲೋಕಕ್ಕೆ ಯಾರು ಏರಿ ಹೋಗುವರು?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ಪವಿತ್ರ್ ಪುಸ್ತಕ್ ವಿಶ್ವಾಸಾಚ್ಯಾ ವೈನಾ ದೆವಾಚ್ಯಾ ವಾಂಗ್ಡಾ ಖರ್ಯಾ ವಾಟೆನ್ ಚಲಲ್ಲಿ ಮನುನ್ ಘೆತಲ್ಯಾಂಚ್ಯಾ ವಿಶಯಾತ್ ಅಶೆ ಮನ್ತಾ “ತುಮ್ಚ್ಯಾತ್ಲೆ ಕೊನ್‍ಬಿ ತುಮ್ಕಾಚ್ ಜೆಜುಕ್ ಖಾಲ್ತಿ ಹಾನುಕ್ ಸರ್‍ಗಾ ಪತರ್ ವರ್‍ತಿ ಕೊನ್‍ ಜಾತಾ ಮನುನ್ ಇಚಾರ್‍ತಲೆ ನಕ್ಕೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:6
15 ತಿಳಿವುಗಳ ಹೋಲಿಕೆ  

ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.


ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೇ, ನಿಮ್ಮ ಪೂರ್ವಿಕರು ಮನ್ನಾವನ್ನು ತಿಂದರೂ ಸತ್ತರು, ಆದರೆ, ಈ ರೊಟ್ಟಿಯನ್ನು ತಿನ್ನುವವನು ಸದಾಕಾಲಕ್ಕೂ ಜೀವಿಸುವನು” ಎಂದು ಹೇಳಿದನು.


ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.


ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ; ನಂಬಿಕೆಯಿಂದ ಬರುವ ನೀತಿಯಾಗಿದೆ.


ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.


ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.


ದೇವರು ಕೊಡುವ ಆ ರೊಟ್ಟಿ ಯಾವುದೆಂದರೆ, ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದ್ದೇ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು