Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈಗ ನಾನು ಇಸ್ರಯೇಲರಲ್ಲದ ನಿಮ್ಮನ್ನು ಉದ್ದೇಶಿಸಿ ಹೇಳುತ್ತೇನೆ: ನಾನು ನಿಮ್ಮಂಥ ಅನ್ಯಜನರಿಗೆ ಪ್ರೇಷಿತನಾಗಿ ಕಳುಹಿಸಲ್ಪಟ್ಟವನು. ಇದರ ಬಗ್ಗೆ ಹೆಮ್ಮೆಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅನ್ಯಜನರಾಗಿರುವ ನಿಮ್ಮ ಸಂಗಡ ಮಾತಾಡುತ್ತೇನೆ. ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಉದ್ಯೋಗವನ್ನು ಗಣ್ಯತೆಗೆ ತರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈಗ ನಾನು ಯೆಹೂದ್ಯರಲ್ಲದ ಜನರೊಂದಿಗೆ ಮಾತಾಡುತ್ತಿದ್ದೇನೆ. ನಾನು ಅವರಿಗೆ ಅಪೊಸ್ತಲನಾಗಿದ್ದೇನೆ. ಆದ್ದರಿಂದ ನಾನು ಈ ಕೆಲಸವನ್ನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿಯೇ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೂದ್ಯರಲ್ಲದವರಾಗಿರುವ ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ನಾನು ಯೆಹೂದ್ಯರಲ್ಲದವರಿಗೆ ಅಪೊಸ್ತಲನಾಗಿರುವಷ್ಟರ ಮಟ್ಟಿಗೆ ನನ್ನ ಸೇವೆಯನ್ನು ಪ್ರಭಾವಗೊಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅತ್ತಾ ಮಿಯಾ ತುಮ್ಚ್ಯಾಕ್ಡೆ ಜುದೆವ್ ಹೊತ್ತ್ಯಾ ಲೊಕಾನಿಕ್ಡೆ ಬೊಲುಲಾ: ಕವ್ಡೆ ಪತರ್ ಮಿಯಾ ಜುದೆವ್ ನ್ಹಯ್ ಹೊತ್ತ್ಯಾಂಚೊ ಅಪೊಸ್ತಲ್ ಹೊವ್ನ್ ಹಾಂವ್, ತವ್ಡೆ ಪತರ್ ಮಿಯಾ ಮಾಜ್ಯಾ ಕಾಮಾಚ್ಯಾ ವಿಶಯಾತ್ ಹೊಗ್ಳುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:13
11 ತಿಳಿವುಗಳ ಹೋಲಿಕೆ  

ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.


ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ


ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,


ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು.


ಆದರೆ ಆತನು; ‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’” ಹೇಳಿದನು.


ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು