Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬದಾಗಿ ಎಣಿಸಿಕೊಳ್ಳದಂತೆ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ; ಅದೇನಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸಹೋದರ ಸಹೋದರಿಯರೇ, ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳದಂತೆ ಇದುವರೆಗೆ ರಹಸ್ಯವಾಗಿದ್ದ ಸತ್ಯವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ: ಇಸ್ರೇಲಿನ ಜನರಲ್ಲಿ ಒಂದು ಪಾಲು ಮಂದಿ ಮೊಂಡರಾದರು. ಆದರೆ ಯೆಹೂದ್ಯರಲ್ಲದ ಜನರೆಲ್ಲರೂ ದೇವರ ಬಳಿಗೆ ಬಂದಾಗ ಅವರ ಮೊಂಡತನವು ಇಲ್ಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಪ್ರಿಯರೇ, ನೀವು ಈ ಮರ್ಮದ ಬಗ್ಗೆ ಅಜ್ಞಾನಿಗಳಾಗಿರಬೇಕೆಂದು ನಾನು ಬಯಸುವುದಿಲ್ಲ. ಅದೇನೆಂದರೆ, ಯೆಹೂದ್ಯರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವವರೆಗೆ ಮಾತ್ರ ಇಸ್ರಾಯೇಲರು ತಮ್ಮ ಹೃದಯದ ಕಾಠಿಣ್ಯಕ್ಕೆ ತಾತ್ಕಾಲಿಕವಾಗಿ ಒಳಗಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಮಾಜ್ಯಾ ಭಾವಾನು ಅನಿ ಭೆನಿಯಾನು, ಎಕ್ ಘುಟಾನ್ ಹೊತ್ತೆ ಖರೆ ಹಾಯ್ ತೆ ತುಮ್ಕಾ ಗೊತ್ತ್ ರ್‍ಹಾವ್ಕ್ ಪಾಜೆ ಮನ್ತಲಿ ಎಕ್ ಮಾಜಿ ಆಶಾ, ಅನಿ ಹೆ ತುಮ್ಕಾ ತುಮಿ ಕವ್ಡೆ ಶಾನೆ ಹಾಸಿ ಮನುನ್ ಚಿಂತಲ್ಯಾತ್ನಾ ಧುರ್ ಥವ್ತಾ. ತೆ ಕಾಯ್ ಮಟ್ಲ್ಯಾರ್ , ಇಸ್ರಾಯೆಲಾಚ್ಯಾ ಲೊಕಾಂಚೆ ಮಂಡ್‍ಪಾನ್ ತಸೆಚ್ ರ್‍ಹಾಯ್ನಾ, ಜುದೆವ್ ನ್ಹಯ್ ಹೊತ್ತಿ ಸಗ್ಳಿ ಲೊಕಾ ದೆವಾಕ್ಡೆ ಯೆಯ್ ಪತರ್ ತೆ ರ್‍ಹಾತಾ ಮಾನಾ ಸರುನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:25
41 ತಿಳಿವುಗಳ ಹೋಲಿಕೆ  

ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.


ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,


ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.


ಏಳನೆಯ ದೇವದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತ್ತೂರಿಯನ್ನು ಊದುವುದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ದೇವರ ಮರ್ಮವನ್ನು ತನ್ನ ದಾಸರಾದ ಪ್ರವಾದಿಗಳಿಗೆ ತಿಳಿಸಿದ್ದ ಪ್ರಕಾರ ನೆರವೇರುವುದು” ಎಂದು ಹೇಳಿದನು.


ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.


ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು.


ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.


ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.


ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.


ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.


ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.


ಸಹೋದರರೇ ಪವಿತ್ರಾತ್ಮನಿಂದುಂಟಾಗುವ ವರಗಳನ್ನು ಕುರಿತು ನಿಮಗೆ ತಿಳಿವಳಿಕೆಯಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.


ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ, ತಾನೇ ಜ್ಞಾನಿಯೆಂದು ಸೋಮಾರಿಯು ಎಣಿಸಿಕೊಳ್ಳುವನು.


ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.


ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.


ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ, ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.


ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.


ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.


ದೇವರು ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ.


ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು.


ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವುದು ಎಷ್ಟೋ ಯುಕ್ತವಾಗಿದೆಯಲ್ಲವೇ.


ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ.


ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಗುಪ್ತವಾಗಿದ್ದ ಸತ್ಯಾರ್ಥಗಳ ವಿಷಯದಲ್ಲಿ ದೇವರ ಮನೆವಾರ್ತೆಯವರೆಂತಲೂ ಪರಿಗಣಿಸಲಿ.


ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.


ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳ ದೂತರು, ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು