Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆಂಬದಾಗಿ ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನನ್ನ ಸ್ನೇಹಿತರೇ, ನಿಮಗೆ ಕೇಡುಮಾಡುವ ಜನರನ್ನು ದಂಡಿಸಲು ಪ್ರಯತ್ನಿಸಬೇಡಿ. ದೇವರು ತನ್ನ ಕೋಪದಿಂದ ಅವರನ್ನು ದಂಡಿಸುವವರೆಗೆ ಕಾದುಕೊಂಡಿರಿ. “ನಾನೇ ದಂಡಿಸುವವನು; ನಾನೇ ಜನರಿಗೆ ಮುಯ್ಯಿತೀರಿಸುವವನು ಎಂದು ಪ್ರಭುವು ಹೇಳುತ್ತಾನೆ” ಎಂಬುದಾಗಿ ಬರೆಯಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸದೆ, ಅದನ್ನು ದೇವರ ಕೋಪಕ್ಕೆ ಬಿಟ್ಟುಬಿಡಿರಿ. ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸೇರಿದ್ದು. ನಾನು ಅದನ್ನು ತೀರಿಸುವೆನು, ಎಂದು ಕರ್ತನು ಹೇಳುತ್ತಾರೆ,” ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಾಜ್ಯಾ ಪ್ರಿತಿಚ್ಯಾನು, ಕನ್ನಾಬಿ ಶೆಡ್ ಕಾಡುನ್ ಘೆವ್‍ನಕಾಶಿ; ತೆ ದೆವಾಚ್ಯಾ ರಾಗಾಚ್ಯಾ ತಾಬೆತ್ ಸೊಡಾ. ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಪುಸ್ತಕ್ ಮನ್ತಾ: “ಮಿಯಾ ಶೆಡ್ ಕಾಡುನ್ ಘೆತಾ, ಮಿಯಾ ತೆ ಫಾಟಿ ಪರ್ತುನ್ ದಿತಾ ಮನುನ್ ಸರ್ವೆಸ್ವರ್ ಮನ್ತಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:19
24 ತಿಳಿವುಗಳ ಹೋಲಿಕೆ  

ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.


“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.


“ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆನು, ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು” ಅಂದುಕೊಳ್ಳಬೇಡ.


ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ, ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು.


ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.


“‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.


ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ; ಶಪಿಸದೆ ಆಶೀರ್ವದಿಸಿರಿ.


ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.


ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.


ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.


ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ, ನಿನ್ನ ಬುದ್ಧಿಯೂ ಸ್ತೋತ್ರಾರ್ಹವೆ. ಸರಿ.


ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ ನಿನ್ನ ವಿರೋಧಿಗಳೂ, ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಎದೋಮು ಯೆಹೂದ ವಂಶಕ್ಕೆ ಪ್ರತಿಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ.”


ಇದಲ್ಲದೆ ದಾವೀದನು, “ಯೆಹೋವನ ಆಣೆ, ಅವನು ಯೆಹೋವನಿಂದ ಸಾಯುವನು, ಇಲ್ಲವೆ ಕಾಲ ತುಂಬಿದ ಮೇಲೆ ಮರಣ ಹೊಂದುವನು ಅಥವಾ ಯುದ್ಧದಲ್ಲಿ ಸಾಯುವನು.


ತನ್ನ ಅಭಿಷಿಕ್ತನಿಗೆ ಕೈಯೆತ್ತದಂತೆ ಯೆಹೋವನು ನನ್ನನ್ನು ತಡೆಯಲಿ. ಈಗ ಅವನ ತಲೆಯ ಬಳಿಯಲ್ಲಿರುವ ಬರ್ಜಿಯನ್ನು, ನೀರಿನ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ” ಎಂದು ಹೇಳಿ


ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.


ಸೈತಾನನಿಗೆ ಅವಕಾಶಕೊಡಬೇಡಿರಿ.


ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು