Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದೇವರು ನನಗೆ ದಯಪಾಲಿಸಿರುವ ಸೇವೆಯ ನಿಮಿತ್ತ ನಾನು ನಿಮಗೆ ಹೇಳುವ ಬುದ್ಧಿಮಾತಿದು: ನಿಮ್ಮಲ್ಲಿ ಯಾರೂ ತನ್ನನ್ನೇ ಅತಿಯಾಗಿ ಭಾವಿಸಿಕೊಳ್ಳದಿರಲಿ. ದೇವರು ತನಗೆ ಇತ್ತಿರುವ ವಿಶ್ವಾಸದ ಪರಿಮಾಣದ ಮೇರೆಗೆ ಪ್ರತಿಯೊಬ್ಬನೂ ತನ್ನ ಬಗ್ಗೆ ಸರಿಯಾದ ಅಭಿಪ್ರಾಯ ಹೊಂದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವರು ನನಗೆ ಕೃಪೆಮಾಡಿದ ಸೇವೆಯನ್ನು ನಡಿಸಿ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ವಿಶ್ವಾಸ ಬಲವನ್ನು ಕೊಟ್ಟನೋ ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ಭಾವಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನಗೆ ದಯಪಾಲಿಸಿರುವ ಕೃಪೆಯಿಂದ ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಾನು ಹೇಳುವುದೇನೆಂದರೆ, ನೀವು ಭಾವಿಸುವುದಕ್ಕಿಂತ ಹೆಚ್ಚಾಗಿ ಯಾರೂ ನಿಮ್ಮನ್ನು ನೀವೇ ಉನ್ನತವಾಗಿ ಭಾವಿಸಿಕೊಳ್ಳಬೇಡಿರಿ. ಅದರ ಬದಲಾಗಿ ದೇವರು ನಿಮಗೆ ಅನುಗ್ರಹಿಸಿರುವ ವಿಶ್ವಾಸದ ಅಳತೆಗೆ ಅನುಸಾರವಾಗಿ ಸ್ವಸ್ಥಚಿತ್ತವುಳ್ಳವರಾಗಿ ಭಾವಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ದೆವಾಚ್ಯಾ ಕುರ್ಪೆನ್ ಮಾಕಾ ಗಾವಲ್ಲ್ಯಾ ದೆನ್ಗಿಚ್ಯಾ ಸಾಟ್ನಿ ಮಿಯಾ ತುಮ್ಕಾ ಹರಿ ಎಕ್ಲ್ಯಾಕ್ನಿ ಸಾಂಗ್ತಾ: ತುಮ್ಚ್ಯಾ ಎವ್ಡ್ಯಾಕ್ ತುಮಿ ಮೊಟೆಪಾನ್ ಚಿಂತುಕ್ ಜಾವ್‍ನಕಾಶಿ, ತುಮಿ ಚಿಂತಲ್ಯಾಕ್ ಮಿತ್ ರ್‍ಹಾಂವ್ದಿತ್, ತುಮ್ಚ್ಯಾತ್ಲೊ ಹರಿ ಎಕ್ಲೊ ದೆವಾನ್ ಅಪ್ನಾಕ್ ದಿಲ್ಲ್ಯಾ ವಿಶ್ವಾಸಾಚ್ಯಾ ಮಾಪಾಚ್ಯಾ ಪರ್‍ಕಾರ್ ಅಪ್ನಾಚ್ಯಾ ಮೊಟೆಪಾನಾಚ್ಯಾ ವಿಶಯಾತ್ ಚಿಂತುಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:3
47 ತಿಳಿವುಗಳ ಹೋಲಿಕೆ  

ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ.


ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”


ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.


ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.


ನೀನು ಅತಿಯಾಗಿ ನೀತಿವಂತನಾಗಿರಬೇಡ, ನಿನ್ನ ದೃಷ್ಟಿಯಲ್ಲಿ ನೀನು ಜ್ಞಾನಿಯಾಗಿರಬೇಡ. ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ?


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.


ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.


ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?


ಆದರೆ ಕರ್ತನು ಪ್ರತಿಯೊಬ್ಬನಿಗೆ ನೇಮಿಸಿರುವ ಜವಾಬ್ದಾರಿಗೂ ಹಾಗೂ ದೇವರು ಅವರನ್ನು ಯಾವುದಕ್ಕೆ ಕರೆದನೋ ಅದಕ್ಕೂ ಸರಿಯಾಗಿ ಜೀವಿಸಲಿ. ಹೀಗೆ ಎಲ್ಲಾ ಸಭೆಗಳಲ್ಲಿಯೂ ಅನುಸರಿಸಿಬೇಕೆಂದು ನಾನು ಅಜ್ಞಾಪಿಸುತ್ತೇನೆ.


ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,


ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯಲ್ಲಿ ಸ್ವಸ್ಥರು ಆಗಿರಬೇಕೆಂದು ಬೋಧಿಸು.


ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.


ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ತಮೇಲೆ ಜೀವಿತನಾಗಿ ಎದ್ದು ಬಂದು ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.


ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ ಮಾದರಿಯಾಗಿ, ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದಸ್ತ್ರಿಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕವುಳ್ಳವರೂ, ಕ್ಷಮಾಶಿಲರೂ, ಪತಿವ್ರತೆಯರೂ


ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.


ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.


ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು.


ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆಯಲ್ಲಿಯೂ, ಪ್ರೀತಿಯಲ್ಲಿಯೂ, ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಮಕ್ಕಳನ್ನು ಹೆರುವುದರಲ್ಲಿ ರಕ್ಷಣೆಹೊಂದುವರು.


ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ, ಸಭ್ಯತೆಯುಳ್ಳವರಾಗಿಯೂ ಇದ್ದು, ಗೌರವಕ್ಕೆ ತಕ್ಕ ಉಡುಪನ್ನೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆಯನ್ನು ಹೆಣೆಯುವುದು, ಚಿನ್ನ, ಮುತ್ತು, ಬೆಲೆಯುಳ್ಳ ವಸ್ತ್ರ


ಆದರೆ ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು.


ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳಿದುಕೊಳ್ಳಬಹುದು.


ನನ್ನನ್ನು ಸಂರಕ್ಷಿಸುವ ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬುವ ಒಂದೇ ವಿಷಯದಲ್ಲಿ ಹೊರತು ಇನ್ಯಾವ ವಿಷಯದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆಮಾಡಿಲ್ಲವಲ್ಲಾ? ನನ್ನ ಈ ತಪ್ಪನ್ನು ಕ್ಷಮಿಸಿರಿ.


ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.


ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.


ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, ಸ್ವಂತಮಾನವನ್ನು ಹೆಚ್ಚಾಗಿ ಯೋಚಿಸುವುದು ಮಾನವಲ್ಲ.


ನಿಮ್ಮ ಸಭೆಗೆ ನಾನು ಕೆಲವು ಮಾತುಗಳನ್ನು ಬರೆದಿದ್ದೆನು; ಅಲ್ಲಿಯ ಸಭೆಗೆ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುತ್ತಿಲ್ಲ.


ಅಪರಾಧಗಳನ್ನು ಮಾಡುವುದರಿಂದಲೂ ಹಾಗೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ ಮತ್ತು ನಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.


ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ.


ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ,


ನಾವಾದರೋ ನಮ್ಮ ಯೋಗ್ಯತೆಗೆ ಮೀರಿ ಹೊಗಳಿಕೊಳ್ಳದೇ ದೇವರು ನಮಗೆ ನೇಮಿಸಿರುವಂಥ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಈ ಮೇರೆಯೊಳಗಿದ್ದು ನಿಮ್ಮ ತನಕ ಬಂದಿದ್ದೇವೆ.


ಯಾಕೆಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು