ರೋಮಾಪುರದವರಿಗೆ 13:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇದೆಂಥ ಕಾಲವೆಂದು ತಿಳಿದಿರುವ ನೀವು ಇದೆಲ್ಲವನ್ನು ಮಾಡಬೇಕು. ನಿದ್ರೆಯಿಂದ ಎಚ್ಚೆತ್ತುಕೊಳ್ಳುವ ವೇಳೆಯು ಸಮೀಪಿಸಿತು. ನಾವು ಕ್ರಿಸ್ತಯೇಸುವನ್ನು ವಿಶ್ವಾಸಿಸಲು ಆರಂಭಿಸಿದಾಗ ಇದ್ದುದಕ್ಕಿಂತಲೂ ಈಗ ನಮ್ಮ ಉದ್ಧಾರವು ಸಮೀಪವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ವಿಮೋಚನೆಯು ಹತ್ತಿರವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾವು ಪ್ರಾಮುಖ್ಯವಾದ ಸಮಯದಲ್ಲಿ ಜೀವಿಸುತ್ತಿರುವುದರಿಂದ ಈ ವಿಷಯಗಳನ್ನು ಹೇಳುತ್ತಿದ್ದೇನೆ ಎಂಬುದು ನಿಮಗೆ ಗೊತ್ತೇ ಇದೆ. ಹೌದು, ನೀವು ನಿದ್ರೆಯಿಂದ ಎಚ್ಚರಗೊಳ್ಳುವ ಕಾಲ ಇದಾಗಿದೆ. ನಾವು ವಿಶ್ವಾಸಿಗಳಾದ ಕಾಲಕ್ಕಿಂತ ಈಗ ನಮ್ಮ ರಕ್ಷಣೆಯು ಸಮೀಪವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಈಗಿನ ಕಾಲವನ್ನು ತಿಳಿದು ಇದನ್ನೆಲ್ಲಾ ಮಾಡಿರಿ. ನೀವು ನಿದ್ರೆಯಿಂದ ಎಚ್ಚರಗೊಳ್ಳುವ ಗಳಿಗೆಯಾಗಿದೆ. ಏಕೆಂದರೆ, ನಮ್ಮ ರಕ್ಷಣೆಯು ನಾವು ಮೊದಲು ವಿಶ್ವಾಸವಿಟ್ಟಿದಕ್ಕಿಂತ ಈಗ ಹತ್ತಿರವಾಗಿರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಹೆ ಸಗ್ಳೆ ಬಗ್ತಾನಾ, ಅಮಿ ಖಲ್ಯಾ ಎಳಾರ್ ಯೆವ್ನ್ ಪಾವ್ಲಾ ಮನ್ತಲೆ ಕಳ್ವುನ್ ಘೆವಾ, ಅಮಿ ನಿಜೆತ್ಲೊ ಉಟ್ತಲೊ ಎಳ್ ಯೆವ್ನ್ ಪಾವ್ಲೊ, ಅಮ್ಚಿ ಸುಟ್ಕಾ ಅಮಿ ವಿಶ್ವಾಸ್ ಕರುಕ್ ಚಾಲು ಕರಲ್ಲಾಂವ್ ತ್ಯಾ ಎಳಾರ್ ಹೊತ್ತಿ ತ್ಯೆಂಚ್ಯಾನಿಕಿ ಲೈ ಜಗ್ಗೊಳ್ ಯೆವ್ನ್ ಪಾವ್ಲಾ. ಅಧ್ಯಾಯವನ್ನು ನೋಡಿ |