Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 13:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದ್ದರಿಂದ ಸಲ್ಲಿಸಬೇಕಾದುದನ್ನು ಅವರಿಗೆ ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ವಿಧೇಯತೆಯೋ ಅವರಿಗೆ ವಿಧೇಯತೆಯನ್ನು, ಯಾರಿಗೆ ಗೌರವವೋ ಅವರಿಗೆ ಗೌರವವನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ಯಾರ್ಯಾರಿಗೆ ಏನೇನು ಕೊಡಬೇಕೋ ಅದನ್ನೆಲ್ಲಾ ಅವರಿಗೆ ಕೊಡಿರಿ. ಯಾವ ತೆರಿಗೆಯನ್ನಾದರೂ ಕೊಡಬೇಕಿದ್ದರೆ ಅದನ್ನು ಕೊಟ್ಟುಬಿಡಿರಿ. ಯಾರಿಗೆ ಗೌರವ ಕೊಡಬೇಕೋ ಅವರಿಗೆ ಗೌರವ ಕೊಡಿರಿ. ಯಾರಿಗೆ ಮರ್ಯಾದೆ ತೋರಿಸಬೇಕೊ ಅವರಿಗೆ ಮರ್ಯಾದೆಯನ್ನು ತೋರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ಯಾರಿಗೆ ಏನು ಸಲ್ಲಿಸಬೇಕೋ ಅದನ್ನು ಸಲ್ಲಿಸಿರಿ. ತೆರಿಗೆ ಕಟ್ಟಬೇಕಾಗಿದ್ದರೆ ತೆರಿಗೆಯನ್ನು, ಸುಂಕ ಕೊಡಬೇಕಾಗಿದ್ದರೆ ಸುಂಕವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು, ಗೌರವ ಸಲ್ಲಿಸಬೇಕಾಗಿದ್ದರೆ ಗೌರವವನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಚೆಸಾಟ್ನಿ ಜೆ ಕೊನಾ-ಕೊನಾಚೆ ತುಮಿ ದಿತಲೆ ಹಾಶಿ, ತೆ ದಿವಾ; ಸ್ವತಾಚಿ ಹೊಂವ್ದಿತ್, ಅಸ್ತಿಚಿ ತೆರ್‍ಗಿ ಹೊಂವ್ದಿತ್ ದಿವಾ, ಅನಿ ತೆಂಕಾ ಮಾನ್ ಅನಿ ಗೌರವ್ ದಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 13:7
23 ತಿಳಿವುಗಳ ಹೋಲಿಕೆ  

ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.


ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು.


ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.


ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.


ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.


ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.


ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.


ದಾಸತ್ವ ನೊಗದ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಪೂರ್ಣ ಗೌರವಕ್ಕೂ ಯೋಗ್ಯರೆಂದೆಣಿಸಲಿ, ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದನೆ ಉಂಟಾಗುತ್ತದೆ.


ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.


“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.


ಯೇಸು, “ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ” ಎಂದು ಹೇಳಿದನು. ಅದಕ್ಕೆ ಅವರು ಆತನ ವಿಷಯವಾಗಿ ಬಹು ಆಶ್ಚರ್ಯಪಟ್ಟರು.


ಆಗ ಯೆಹೋವನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರು ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು


“‘ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.


“‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.


“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.


ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ, ಹರಟೆಮಾತನಾಡುವವರೂ, ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ.


ಉಪಕಾರಮಾಡುವುದಕ್ಕೆ ನಿನ್ನಿಂದ ಸಾಧ್ಯವಾಗುವಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ.


ಕೈಸರನಿಗೆ ಕಂದಾಯ ಕೊಡುವುದು ಸರಿಯೋ ಸರಿಯಲ್ಲವೋ?” ಎಂದು ಆತನನ್ನು ಕೇಳಿದರು.


ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ.


ಅವರಲ್ಲಿ ಒಬ್ಬಳು ಅರಸನಿಗೆ, “ನನ್ನ ಒಡೆಯಾ ಕೇಳು, ನಾನು ಮತ್ತು ಈ ಹೆಂಗಸು ಒಂದೇ ಮನೆಯಲ್ಲಿ ವಾಸಮಾಡುತ್ತಿದ್ದೇವೆ. ಇವಳು ಮನೆಯಲ್ಲಿದ್ದಾಗಲೇ ನಾನು ಮಗುವನ್ನು ಹೆತ್ತೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು