Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯಾವ ಪದಾರ್ಥವು ಸ್ವತಃ ಅಶುದ್ಧವಲ್ಲವೆಂದು ಪ್ರಭುಯೇಸುವಿನಲ್ಲಿ ನಾನು ಖಚಿತವಾಗಿ ಹೇಳಬಲ್ಲೆ. ಆದರೆ, ಒಂದು ಪದಾರ್ಥವನ್ನು ಅಶುದ್ಧವೆಂದು ಯಾರಾದರೂ ಭಾವಿಸಿದರೆ ಅದು ಅವನಿಗೆ ಅಶುದ್ಧವೇ ಆಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಬಲ್ಲೆನು, ಮತ್ತು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ಪ್ರಭುವಾದ ಯೇಸುವಿನಲ್ಲಿದ್ದೇನೆ. ಯಾವ ಆಹಾರಪದಾರ್ಥವನ್ನೇ ಆಗಲಿ ತಿನ್ನುವುದು ತಪ್ಪಲ್ಲವೆಂದು ನನಗೆ ಗೊತ್ತಿದೆ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ನಂಬಿದರೆ, ಆ ಆಹಾರಪದಾರ್ಥವು ಅವನಿಗೆ ಅಶುದ್ಧವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯಾವುದೇ ಪದಾರ್ಥವು ತನ್ನಷ್ಟಕ್ಕೆ ಅಶುದ್ಧವಲ್ಲ ಎಂದು ನಾನು ಕರ್ತ ಆಗಿರುವ ಯೇಸುವಿನಲ್ಲಿ ನಿಶ್ಚಯವಾಗಿ ಬಲ್ಲೆನು. ಆದರೆ ಯಾರಾದರೂ ಅಶುದ್ಧವೆಂದು ಪರಿಗಣಿಸಿದರೆ ಅದು ಅವರಿಗೆ ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಧನಿಯಾ ಜೆಜು ಕ್ರಿಸ್ತಾಚೊ ಮನ್ ಮಾಕಾ ಗೊತ್ತ್ ಹೊತ್ತ್ಯಾ ಪರ್‍ಕಾರ್, ಖಲಿಬಿ ಖಾತಲಿ ಜಿನ್ಸಾ ಹೊಂವ್ದಿತ್ ಬುರ್ಶಿ ನ್ಹಯ್ ಮನುನ್ ಮಾಕಾ ಗೊತ್ತ್ ಹಾಯ್; ಖರೆ ಕೊನ್‍ಬಿ ಎಕ್ಲೊ ಅಪ್ನಿ ತೆ ಜಿನಸ್ ಬುರ್ಶೆ ಮನುನ್ ಚಿಂತಾ, ಹೊಲ್ಯಾರ್ ತೆಕಾ ತೆ ಬುರ್ಶೆಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:14
12 ತಿಳಿವುಗಳ ಹೋಲಿಕೆ  

ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ.


ಒಬ್ಬನು ಯಾವುದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ.


ಆದಾಗ್ಯೂ, ಈ ತಿಳಿವಳಿಕೆಯು ಎಲ್ಲರಲ್ಲಿಯೂ ಇಲ್ಲ. ಪ್ರತಿಯಾಗಿ, ಕೆಲವರು ಈ ವರೆಗೂ ವಿಗ್ರಹಗಳ ಬಳಿಗೆ ಹೋಗುವ ರೂಢಿಯಲ್ಲಿದರಿಂದ ತಾವು ತಿನ್ನುವ ಈ ಆಹಾರವು ವಿಗ್ರಹಕ್ಕೆ ಅರ್ಪಿಸಿದ್ದೆಂದು ತಿನ್ನುತ್ತಾರೆ; ಅವರ ಮನಸ್ಸಾಕ್ಷಿಯು ಬಲಹೀನವಾದ್ದದರಿಂದ ಕಲುಷಿತವಾಗಿ ಹೋಗಿದೆ.


ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ.


ಜ್ಞಾನಿಯಾದ ನೀನೇ ವಿಗ್ರಹಾಲಯದಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲವಾದ ಮನಸ್ಸಾಕ್ಷಿಯುಳ್ಳ ಸಹೋದರನು ಕಂಡರೆ ಅವನೂ ಕೂಡ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದಕ್ಕೆ ಧೈರ್ಯಗೊಂಡನಲ್ಲವೇ.


ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.


ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ.


ಸಂಶಯಪಟ್ಟು ಊಟಮಾಡುವವನು ಸಂಶಯದಿಂದ ತಿನ್ನುವ ಕಾರಣ ತನ್ನ ಊಟದ ವಿಷಯದಲ್ಲಿ ನಂಬಿಕೆಯಿಲ್ಲದೆ ದೋಷಿಯಾಗಿದ್ದಾನೆ. ನಂಬಿಕೆಯ ಆಧಾರವಿಲ್ಲದಿರುವುದೆಲ್ಲವೂ ಪಾಪವೇ ಆಗಿದೆ.


ದೇವರು ಕಟ್ಟಿದ್ದನ್ನು ನೀನು ಆಹಾರದ ನಿಮಿತ್ತವಾಗಿ ಕೆಡವಬೇಡ. ಎಲ್ಲಾ ಪದಾರ್ಥಗಳೂ ಶುದ್ಧವೇ; ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವುದು ಕೆಟ್ಟದ್ದು.


ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ ಅಂದರೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು