Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮಾಂಸಾಹಾರಿಯು ಸಸ್ಯಾಹಾರಿಯನ್ನು ಹೀನೈಸಬಾರದು; ಸಸ್ಯಾಹಾರಿಯು ಮಾಂಸಾಹಾರಿಯನ್ನು ದೋಷಿಯೆಂದು ತೀರ್ಪುಕೊಡಬಾರದು. ಏಕೆಂದರೆ, ಇಬ್ಬರೂ ದೇವರಿಂದ ಅಂಗೀಕೃತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯಾವ ಬಗೆಯ ಆಹಾರವನ್ನಾದರೂ ತಿನ್ನಬಹುದೆಂದು ನಂಬುವ ವ್ಯಕ್ತಿಯು ತರಕಾರಿಯನ್ನು ಮಾತ್ರ ತಿನ್ನುವ ವ್ಯಕ್ತಿಗಿಂತ ತನ್ನನ್ನು ಉತ್ತಮನೆಂದು ಭಾವಿಸಿಕೊಳ್ಳಕೂಡದು. ಅಂತೆಯೇ, ತರಕಾರಿಗಳನ್ನು ಮಾತ್ರ ತಿನ್ನುವ ವ್ಯಕ್ತಿಯು ಎಲ್ಲಾ ಆಹಾರಪದಾರ್ಥಗಳನ್ನು ತಿನ್ನುವ ವ್ಯಕ್ತಿಯನ್ನು ತಪ್ಪಿತಸ್ಥನೆಂದು ನಿರ್ಣಯಿಸಕೂಡದು. ದೇವರು ಆ ವ್ಯಕ್ತಿಯನ್ನೂ ಸ್ವೀಕರಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮಾಂಸಾಹಾರಿಯು ಸಸ್ಯಾಹಾರಿಯನ್ನು ಹೀನೈಸದಿರಲಿ. ಸಸ್ಯಾಹಾರಿಯು ಮಾಂಸಾಹಾರಿಯನ್ನು ತೀರ್ಪು ಮಾಡದಿರಲಿ. ಏಕೆಂದರೆ ದೇವರು ಇಬ್ಬರನ್ನು ಸ್ವೀಕಾರ ಮಾಡಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕಾಯ್ಬಿ ಖಾತಲ್ಯಾ ಮಾನ್ಸಾನ್ ತಸೆ ಕಾಯ್ಬಿ ಖಾಯ್‍ನಸಲ್ಲ್ಯಾಚಿ ಪರ್ವಾ ಕರಿನಸ್ತಾನಾ ರ್‍ಹಾವ್ಕ್ ಹೊಯ್ನಾ, ಅನಿ ಜೆ ಕೊನ್ ಖಾಯ್ನಾ ತೆನಿಬಿ ಖಾತಲ್ಯಾಚ್ಯಾ ವಿರೊದ್ ನಿರ್‍ನಯ್ ದಿವ್ಚೆ ನ್ಹಯ್. ಕಶ್ಯಾಕ್ ಮಟ್ಲ್ಯಾರ್ ದೆವಾನ್ ತೆಕಾ ಅಪ್ನಾಚೊ ಕರುನ್ ಘೆಟ್ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:3
20 ತಿಳಿವುಗಳ ಹೋಲಿಕೆ  

ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.


ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.


ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.


ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ,


ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು.


ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾದರೆ ನೀನು ಪ್ರೀತಿಗೆ ತಕ್ಕಂತೆ ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ ಅವನನ್ನು ನಿನಗೆ ಇಷ್ಟವಾದ ಆಹಾರದ ನಿಮಿತ್ತ ಕೆಡಿಸಬಾರದು.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.


ಪೇತ್ರನು, ಈ ವಾಕ್ಯಗಳನ್ನು ಇನ್ನೂ ಹೇಳುತ್ತಿರುವಾಗಲೇ, ಅವನ ವಾಕ್ಯಗಳನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮನು ಇಳಿದನು.


ನಂತರ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು, “ಫರಿಸಾಯರೂ ನಾವೂ ಬಹಳಸಾರಿ ಉಪವಾಸಮಾಡುತ್ತೇವೆ; ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ,


ಆಗ ದೂತನು “ಈ ದೀಪಗಳಿಂದ ಸೂಚಿತವಾದ ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವುದನ್ನು ಸಂತೋಷದಿಂದ ನೋಡುತ್ತೇವೆ. ಹೀಗಿರುವಲ್ಲಿ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?


ಅನ್ಯಭಾಷೆಯವರಾದ ಆ ದ್ವೀಪದವರು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆಯು ಆಗಲೇ ಹೊಯ್ದು ಚಳಿಯಾಗುತ್ತಿದ್ದುದರಿಂದ, ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.


ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ.


ನಂಬಿಕೆಯಲ್ಲಿ ದೃಢವಿಲ್ಲದವರನ್ನು ಸೇರಿಸಿಕೊಳ್ಳಿರಿ, ಆದರೆ ಸಂದೇಹಾಸ್ಪದವಾದ ವಿಷಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ.


ಆದ್ದರಿಂದ ಕ್ರಿಸ್ತನು ನಿಮ್ಮನ್ನು ಸೇರಿಸಿಕೊಂಡಂತೆ ನೀವು ಸಹ ಒಬ್ಬರನ್ನೊಬ್ಬರು ಸೇರಿಸಿಕೊಂಡು ದೇವರನ್ನು ಮಹಿಮೆಪಡಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು