Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಒಂದು ದಿನವನ್ನು ಮಂಗಳಕರವೆಂದು ಭಾವಿಸುವವನು ಪ್ರಭುವಿಗಾಗಿಯೇ ಆ ರೀತಿ ಭಾವಿಸುತ್ತಾನೆ. ಮಾಂಸವನ್ನು ತಿನ್ನುವವನು ಪ್ರಭುವಿಗಾಗಿಯೇ ತಿನ್ನುತ್ತಾನೆ. ಹೇಗೆಂದರೆ, ತಿನ್ನುವ ಆ ಪದಾರ್ಥಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ. ಸಸ್ಯಾಹಾರಿಯೂ ಪ್ರಭುವಿಗಾಗಿಯೇ ಮಾಂಸವನ್ನು ತಿನ್ನದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದಿನವನ್ನು ಗಣ್ಯಮಾಡುವವನು ಕರ್ತನಿಗಾಗಿ ಅದನ್ನು ಗಣ್ಯಮಾಡುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವಸ್ತೋತ್ರ ಮಾಡುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವಸ್ತೋತ್ರ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಮುಖ್ಯವೆಂದು ಯೋಚಿಸುವ ವ್ಯಕ್ತಿಯು ಪ್ರಭುವಿಗೋಸ್ಕರವಾಗಿಯೇ ಹಾಗೆ ಯೋಚಿಸುವವನಾಗಿದ್ದಾನೆ. ಅಂತೆಯೇ ಎಲ್ಲಾ ಬಗೆಯ ಆಹಾರಪದಾರ್ಥಗಳನ್ನು ತಿನ್ನುವ ವ್ಯಕ್ತಿಯು ಪ್ರಭುವಿಗೋಸ್ಕರವೇ ಅವುಗಳನ್ನು ತಿನ್ನುತ್ತಾನೆ. ಹೌದು, ಅವನು ಆ ಆಹಾರಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಒಬ್ಬ ಒಂದು ದಿನವನ್ನು ವಿಶೇಷವೆಂದು ಎಣಿಸುವುದಾದರೆ ಅವನು ಅದನ್ನು ಕರ್ತನಿಗಾಗಿಯೇ ಮಾಡಲಿ. ಮಾಂಸಾಹಾರಿಯು ದೇವರಿಗೆ ಕೃತಜ್ಞತೆಯನ್ನು ಮಾಡಿ ಊಟಮಾಡುವುದಾದರೆ ಅವನು ಅದನ್ನು ಮಾಡುವುದು ಕರ್ತನಿಗಾಗಿಯೇ. ಸಸ್ಯಾಹಾರಿಯು ಕರ್ತನಿಗಾಗಿಯೇ ತಿನ್ನದೆ ಕೃತಜ್ಞತೆ ಸಲ್ಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜೆ ಕೊನ್ ತೊ ದಿಸ್ ಲೈ ಮಹತ್ವಾಚೊ ಮನುನ್ ಚಿಂತಾ, ತೊ ತೆ ಧನಿಯಾಚ್ಯಾ ಗೌರವಾಚ್ಯಾ ಸಾಟ್ನಿ ಕರ್‍ತಾ. ಜೆ ಕೊನ್ ಸಗ್ಳೆ ಖಾತಾ ತೆ ಧನಿಯಾಚ್ಯಾ ಗೌರವಾಸಾಟಿ ಮನುನ್ ಖಾತಾ. ಅನಿ ಅಪ್ನಾಕ್ ಗಾವಲ್ಲ್ಯಾ ಖಾನಾಸಾಟಿ ದೆವಾಕ್ ಧನ್ಯವಾದ್ ದಿತಾ. ಅನಿ ಜೊ ಕೊನ್ ಉಲ್ಲಿ ಜಿನಸಾ ಖಾಯ್ನಾ ತೊಬಿ ಧನಿಯಾಚ್ಯಾ ಗೌರವಾಸಾಟಿ ಖಾತಾ, ಅನಿ ತೊಬಿ ಅನಿ ಎಕ್ ರಿತಿನ್ ದೆವಾಕ್ ಧನ್ಯವಾದ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:6
12 ತಿಳಿವುಗಳ ಹೋಲಿಕೆ  

ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು.


ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.


ನೀವು ಆಯಾ ದಿನಗಳನ್ನೂ, ತಿಂಗಳುಗಳನ್ನೂ, ಕಾಲಗಳನ್ನೂ, ಸಂವತ್ಸರಗಳನ್ನೂ ನಿಷ್ಠೆಯಿಂದ ಆಚರಿಸಿದ್ದೀರಿ.


ಅವರು ಆತನಿಗೆ “ದೇವರ ಕ್ರಿಯೆಗಳನ್ನು ನಾವು ಮಾಡಬೇಕಾದರೆ ಏನು ಮಾಡಬೇಕೆಂದು” ಕೇಳಿದ್ದಕ್ಕೆ,


ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?


ಆಗ ಮೋಶೆ ಅವರಿಗೆ, “ಈ ಹೊತ್ತು ಅದನ್ನು ಊಟ ಮಾಡಿರಿ. ಈ ದಿನವು ಯೆಹೋವನ ಸಬ್ಬತ್ ದಿನವಾಗಿರುವುದರಿಂದ ಈ ದಿನ ಅದು ಹೊಲದಲ್ಲಿ ಕಾಣಿಸಿಕೊಳ್ಳುವುದಿಲ್ಲ.


ಯೆಹೋವನು ಆ ರಾತ್ರಿಯಲ್ಲಿಯೇ ಅವರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡಿದ್ದರಿಂದ ಅವರು ಈ ರಾತ್ರಿಯಲ್ಲಿ ಆತನ ಘನಕ್ಕಾಗಿ ಜಾಗರಣೆಯನ್ನು ಮಾಡಿದರು. ಇಸ್ರಾಯೇಲರೆಲ್ಲರೂ ತಲತಲಾಂತರಕ್ಕೂ ಯೆಹೋವನಿಗೆ ಜಾಗರಣೆಯನ್ನು ಆಚರಿಸಬೇಕಾದ ರಾತ್ರಿಯು ಇದೇ ಆಗಿದೆ.


ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ಅಲ್ಲದೆ ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಆ ಪಾತ್ರೆಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು