Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತನವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾವು ಬದುಕಿದರೂ ಸತ್ತರೂ ಪ್ರಭುವಿಗೆ ಸೇರಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾವು ಬದುಕುವುದಾಗಿದ್ದರೆ, ಪ್ರಭುವಿಗೋಸ್ಕರ ಬದುಕುತ್ತೇವೆ; ಸಾಯುವುದಾಗಿದ್ದರೆ, ಪ್ರಭುವಿಗೋಸ್ಕರ ಸಾಯುತ್ತೇವೆ. ಆದ್ದರಿಂದ ಬದುಕಿದರೂ ಸತ್ತರೂ ನಾವು ಪ್ರಭುವಿಗೆ ಸೇರಿದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಬದುಕಿದರೆ ನಾವು ಕರ್ತನಿಗಾಗಿ ಬದುಕುತ್ತೇವೆ, ಸತ್ತರೆ ಕರ್ತನಿಗಾಗಿ ಸಾಯುತ್ತೇವೆ. ಹೀಗೆ ನಾವು ಬದುಕಿದರೂ ಸತ್ತರೂ ಕರ್ತನಿಗೆ ಸೇರಿದವರಾಗಿರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಮಿ ಝಿತ್ತೆ ಹಾಂವ್ ಜಾಲ್ಯಾರ್, ತೆ ಧನಿಯಾಚ್ಯಾ ಸಾಟ್ನಿ ಅನಿ ಅಮಿ ಮರ್‍ತಾವ್ ಜಾಲ್ಯಾರ್‍ಬಿ ಧನಿಯಾಚ್ಯಾ ಸಾಟಿಚ್. ಅಶೆ ರಾತಾನಾ ಅಮಿ ಝಿತ್ತೆ ರ್‍ಹಾಲ್ಯಾರ್‍ಬಿ ಮರ್ಲ್ಯಾರ್‍ಬಿ ಧನಿಯಾಚೆಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:8
13 ತಿಳಿವುಗಳ ಹೋಲಿಕೆ  

ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.


ನಾವು ಎಚ್ಚರವಾಗಿದ್ದರೂ ಸರಿಯೇ ಅಥವಾ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಯೇಸು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟನು.


ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು.


ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.


ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.


“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.


ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು