Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ, ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನನ್ನು ಮೆಚ್ಚಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೇ ಬಯಸಿ, ವಿಶ್ವಾಸದಲ್ಲಿ ಅವನು ಮತ್ತಷ್ಟು ಪ್ರವರ್ಧಿಸುವಂತೆ ನೆರವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನ ಸುಖವನ್ನು ನೋಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಹಿತವನ್ನು ನೋಡಿಕೊಳ್ಳಬೇಕು. ನಂಬಿಕೆಯಲ್ಲಿ ಬಲಹೀನರಾಗಿರುವವರನ್ನು ಬಲಗೊಳಿಸಲು ನೆರವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಭಕ್ತಿವೃದ್ಧಿಯ ಹಿತಕ್ಕಾಗಿ ಅವರನ್ನು ಸುಖವನ್ನು ನೋಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಹೆಚ್ಯಾ ಬದ್ಲಾಕ್ ಹರಿ ಎಕ್ಲ್ಯಾನಿ ಅಪ್ನಾ- ಅಪ್ನಾಚ್ಯಾ ವಾಂಗುಡ್ಚ್ಯಾ ವಿಶ್ವಾಸಾತ್ ಹೊತ್ತ್ಯಾ ಭಾವಾಂಚ್ಯಾ ವಿಶಯಾತ್ ಚಿಂತುನ್, ತೆಚ್ಯಾ ಬರೆಪಾನಾಸಾಟಿ ಅನಿ ತೆಚೊ ವಿಶ್ವಾಸ್ ಘಟ್ ಹೊಯ್ ಸರ್ಕೆ ಕರುಕ್ ಬಗುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:2
15 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೇ ಪರಹಿತವನ್ನು ಚಿಂತಿಸಲಿ.


ಆದ್ದರಿಂದ ನಾವು ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ.


ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.


ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ.


“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ.


ಆದರೆ ಪ್ರವಾದಿಸುವವನಾದರೋ, ಅವನ ಮಾತುಗಳಿಂದ ಭಕ್ತಿವೃದ್ಧಿಯನ್ನೂ, ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುವವು.


ಹಾಗಾದರೇನು, ಸಹೋದರರೇ? ನೀವು ಸಭೆಯಲ್ಲಿ ಸೇರಿಬರುವಾಗ ಒಬ್ಬನು ಹಾಡುವುದೂ, ಒಬ್ಬನು ಉಪದೇಶಮಾಡುವುದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವುದೂ, ಇನ್ನೂ ಒಬ್ಬನು ಅನ್ಯಭಾಷೆಯನ್ನಾಡುವುದೂ, ಒಬ್ಬನು ಅದರ ಅರ್ಥವನ್ನು ಹೇಳುವುದುಂಟು. ನೀವು ಏನು ಮಾಡಿದರೂ ಸಭೆಯ ಭಕ್ತಿವೃದ್ಧಿಗಾಗಿಯೇ ಮಾಡಿರಿ.


ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುತ್ತಿರುವವರೆಂದು ಭಾವಿಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ, ನಾವು ಕ್ರಿಸ್ತನಲ್ಲಿದ್ದು ನಿಮ್ಮ ಭಕ್ತಿವೃದ್ಧಿಗೋಸ್ಕರವೇ ಮಾತನಾಡುವವರಾಗಿದ್ದೇವೆ.


ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.


ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ,


ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು