Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಹೀಗೆ ನಾನು ದೇವರ ಚಿತ್ತಾನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿಹೊಂದಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅನಂತರ ದೇವರ ಚಿತ್ತವಾದಲ್ಲಿ ನಾನು ಸಂತೋಷದಿಂದ ನಿಮ್ಮಲ್ಲಿ ಬರುತ್ತೇನೆ. ನಿಮ್ಮ ಸಂಗಡವಿದ್ದು ವಿಶ್ರಾಂತಿಪಡೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಹೀಗೆ ನಾನು ದೇವರ ಚಿತ್ತಾನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅನಂತರ, ದೇವರು ಬಯಸುವುದಾದರೆ ನಾನು ನಿಮ್ಮ ಬಳಿಗೆ ಬರುತ್ತೇನೆ. ನಾನು ಸಂತೋಷದಿಂದ ಬಂದು ನಿಮ್ಮ ಸಂಗಡವಿದ್ದು ವಿಶ್ರಾಂತಿಯನ್ನು ಪಡೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆಗ ನಾನು ದೇವರ ಚಿತ್ತಾನುಸಾರ ನಿಮ್ಮ ಬಳಿಗೆ ಸಂತೋಷದಿಂದ ಬಂದು, ನಿಮ್ಮ ಸಂಗಡ ವಿಶ್ರಾಂತಿ ಹೊಂದುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತನ್ನಾ ಮಾಕಾ ಕುಶಿನ್ ತುಮ್ಚಕ್ಡೆ ಯೆವ್ಕ್ ಅನಿ ದೆವಾಚೊ ಮನ್ ರ್‍ಹಾಲ್ಯಾರ್, ಉಲ್ಲೊ ಎಳ್ ತುಮ್ಜ್ಯಾ ವಾಂಗ್ಡಾ ಮಿಯಾ ಉಲ್ಲೆ ಆರಾಮ್ ಘೆವ್ಕ್ ಸಾದ್ಯ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:32
18 ತಿಳಿವುಗಳ ಹೋಲಿಕೆ  

ಅವರು ನನ್ನ ಆತ್ಮವನ್ನೂ ಮತ್ತು ನಿಮ್ಮ ಆತ್ಮಗಳನ್ನೂ ಚೈತನ್ಯಗೊಳಿಸಿದರಲ್ಲ. ಹೀಗಿರುವುದರಿಂದ ಇಂಥವರನ್ನು ಸನ್ಮಾನಿಸಿರಿ.


“ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,


ಹೌದು, ಸಹೋದರನೇ, ಕರ್ತನಲ್ಲಿ ನಿನ್ನಿಂದ ನನಗೆ ಪ್ರಯೋಜನವಾಗುವಂತೆ ಮಾಡು. ಕ್ರಿಸ್ತನಲ್ಲಿ ನನ್ನ ಹೃದಯವನ್ನು ಉಲ್ಲಾಸಗೊಳಿಸು.


ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹವೂ, ಪ್ರೇರಣೆಯೂ ಉಂಟಾದುದರಿಂದ ಅವರ ಬಗ್ಗೆ ಇರುವ ಪ್ರೀತಿಯಿಂದ ನನಗೆ ಬಹಳ ಆನಂದವೂ, ಸಮಾಧಾನವೂ ಉಂಟಾಯಿತು.


ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.


ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ,


ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು “ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು” ಎಂದು ಹೇಳಬೇಕು.


ಆದರೆ ಕರ್ತನ ಚಿತ್ತವಾದರೆ ನಾನು ಬೇಗನೆ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನು ಮಾತ್ರವಲ್ಲ ಅವರ ಬಲವನ್ನು ಕಂಡುಹಿಡಿಯುತ್ತೇನೆ.


ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.


ಸುಗ್ಗೀಕಾಲದಲ್ಲಿ ಹಿಮದ ಶೀತವು ಹೇಗೋ ಕಳುಹಿಸಿದ ಒಡೆಯರಿಗೆ ಆಪ್ತದೂತನು ಹಾಗೆಯೇ ಹಿತ.


ಇದಲ್ಲದೆ ನಿಮ್ಮ ಬಳಿಗೆ ಬರುವಾಗ ಕ್ರಿಸ್ತನಿಂದಾಗುವ ಆಶೀರ್ವಾದಗಳನ್ನು ಹೇರಳವಾಗಿ ತರುವೆನೆಂದು ಬಲ್ಲೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು