Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗೆ ನೀವು ಏಕಮನಸ್ಸಿನಿಂದ ಒಕ್ಕೊರಳಿನಿಂದ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಕೊಂಡಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೀಗೆ ಒಮ್ಮನಸ್ಸಿನಿಂದಲೂ ಒಕ್ಕೊರಲಿನಿಂದಲೂ ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರನ್ನು ಕೊಂಡಾಡುವಂತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗೆ ನೀವು ಏಕ ಮನಸ್ಸಿನಿಂದ ಒಮ್ಮುಖವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಕೊಂಡಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹೀಗೆ ನೀವೆಲ್ಲರೂ ಒಂದೇ ಹೃದಯದಿಂದಲೂ ಒಂದೇ ಮನಸ್ಸಿನಿಂದಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೀಗೆ ನೀವು ಒಂದೇ ಮನಸ್ಸುಳ್ಳವರಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯಾದ ದೇವರನ್ನು ಒಂದೇ ಬಾಯಿಂದ ಮಹಿಮೆ ಪಡಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅಶೆ ತುಮಿ ಸಗ್ಳೆ ಜಾನಾ ಎಕುಚ್ ಧನಾನ್ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಬಾಬಾಚಿ ಸ್ತುತಿ ಕರಿ ಸರ್ಕೆ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:6
14 ತಿಳಿವುಗಳ ಹೋಲಿಕೆ  

ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.


ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.


ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,


ನನ್ನ ಮಾತುಗಳು ಸುಳ್ಳಲ್ಲವೆಂಬುದನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ, ತಂದೆಯೂ ಆಗಿರುವಾತನು ನಿರಂತರ ಸ್ತುತಿ ಹೊಂದತಕ್ಕ ದೇವರೇ ಬಲ್ಲನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು,


ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.


“ಆಗ ಎಲ್ಲರೂ ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು.


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.


ನಿಮಗೋಸ್ಕರ ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ನಿಮಿತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು