Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ನಿಮ್ಮ ಬಳಿಗೆ ಕಳುಹಿಸುವ ನಮ್ಮ ಸಹೋದರಿಯಾದ ಪೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಖ್ರೆಯ ಪಟ್ಟಣದಲ್ಲಿರುವ ಸಭೆಯ ಸೇವಕಿಯಾಗಿದ್ದಾಳೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾನು ನಿಮ್ಮ ಬಳಿಗೆ ಕಳುಹಿಸುತ್ತಿರುವ ಸಹೋದರಿ ಫೊಯಿಬೆಯನ್ನು ಪ್ರೀತಿಯಿಂದ ಸ್ವಾಗತಿಸಿರಿ. ಈಕೆ ಕೆಂಕ್ರೆಯ ಪಟ್ಟಣದ ಸಭಾಸೇವಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ನಿಮ್ಮ ಬಳಿಗೆ ಕಳುಹಿಸುವ ನಮ್ಮ ಸಹೋದರಿಯಾದ ಫೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಕ್ರೆಯ ಪಟ್ಟಣದಲ್ಲಿರುವ ಸಭೆಯ ಸೇವಕಳಾಗಿದ್ದಾಳೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕ್ರಿಸ್ತನಲ್ಲಿ ನಮ್ಮ ಸಹೋದರಿಯಾದ ಪೊಯಿಬೆಯನ್ನು ನಾನು ನಿಮಗೆ ಶಿಫಾರಸು ಮಾಡಲಿಚ್ಛಿಸುತ್ತೇನೆ. ಈಕೆಯು ಕೆಂಕ್ರೆಯ ಪಟ್ಟಣದ ಸಭೆಯಲ್ಲಿ ವಿಶೇಷ ಸಹಾಯಕಳಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಮ್ಮ ಸಹೋದರಿಯೂ ಕೆಂಖ್ರೆಯ ಸಭೆಯ ಸೇವಕಿಯೂ ಆಗಿರುವ ಫೊಯಿಬೆಯನ್ನು ನಿಮಗೆ ಪರಿಚಯಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಕೆಂಕ್ರೆಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚಿ ಸೆವಾ ಕರ್‍ತಲ್ಯಾ ಫೆಬೆ ಮನ್ತಲ್ಯಾ ಭೆನಿಕ್ ಮಿಯಾ ತುಮ್ಚ್ಯಾ ತಾಬೆತ್ ಒಪ್ಸುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:1
10 ತಿಳಿವುಗಳ ಹೋಲಿಕೆ  

ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.


ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ,


ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ” ಅಂದನು.


ನಮ್ಮನ್ನು ನಾವೇ ಮತ್ತೆ ಹೊಗಳಿಕೊಳ್ಳುವುದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡೆದುಕೊಳ್ಳಬೇಕೋ?


ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಸ್ವಂತ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದ್ದರು.


ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು.


ಮತ್ತು ಸಹೋದರಿಯಾದ ಅಪ್ಫಿಯಳಿಗೂ, ನಮ್ಮ ಸಹ ಹೋರಾಟಗಾರನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ಬರೆಯುವುದೇನಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು