Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕರ್ತನಲ್ಲಿ ಆರಿಸಿಕೊಳ್ಳಲ್ಪಟ್ಟವನಾದ ರೂಫನಿಗೂ, ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪ್ರಭುವಿನ ಭಕ್ತರಲ್ಲಿ ಹೆಸರುವಾಸಿಯಾದ ರೂಫನಿಗೂ ನನ್ನನ್ನು ಸ್ವಂತ ಮಗನಂತೆ ನೋಡಿಕೊಂಡ ಅವರ ತಾಯಿಗೂ ನನ್ನ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕರ್ತನ ಭಕ್ತರಲ್ಲಿ ಪ್ರಸಿದ್ಧನಾದ ರೂಫನಿಗೂ ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ರೂಫನಿಗೆ ನನ್ನ ವಂದನೆ ತಿಳಿಸಿರಿ. ಅವನು ಪ್ರಭುವಿನಲ್ಲಿ ವಿಶೇಷವಾದ ವ್ಯಕ್ತಿ. ಅವನ ತಾಯಿಗೂ ನನ್ನ ವಂದನೆ ತಿಳಿಸಿರಿ. ಆಕೆ ನನ್ನನ್ನು ಸ್ವಂತ ಮಗನಂತೆ ನೋಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕರ್ತನಲ್ಲಿ ಆಯ್ಕೆಯಾಗಿರುವ ರೂಫನಿಗೂ ನನಗೂ ತಾಯಿಯಂತಿದ್ದ ಅವನ ತಾಯಿಗೂ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಧನಿಯಾಚ್ಯಾ ಸೆವೆತ್ ಭರ್ಪುರ್ ಸೆವಾ ಕರಲ್ಲ್ಯಾ ಲೆಕಾಚ್ಯಾ ಸರ್ಕೆ ಮಾಕಾ ಬಗುನ್ ಘೆಟಲ್ಲ್ಯಾ ತೆಚ್ಯಾ ಬಾಯ್ಕ್ ಮಿಯಾ ನಮಸ್ಕಾರ್ ಲಿವ್ನ್ ಧಾಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:13
12 ತಿಳಿವುಗಳ ಹೋಲಿಕೆ  

ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ;


ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು.


ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವುದಕ್ಕೆ ಒತ್ತಾಯಪಡಿಸಿದರು. ಅವನು ಯಾರೆಂದರೆ, ಅಲೆಕ್ಸಾಂದ್ರ ಹಾಗೂ ರೂಫ ಎಂಬುವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.


ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.


ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.


ತರುವಾಯ ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು.


ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ” ಅಂದನು.


ಹೀಗೆ ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು” ಎಂದು ಹೇಳಿದನು.


ಕರ್ತನ ಸೇವೆಯಲ್ಲಿ ಪ್ರಯಾಸಪಟ್ಟವರಾದ ತ್ರುಫೈನಳಿಗೂ, ತ್ರುಫೋಸಳಗೂ ವಂದನೆಗಳು. ಕರ್ತನ ಸೇವೆಯಲ್ಲಿ ಬಹಳವಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀಸಳಿಗೆ ವಂದನೆ.


ಅಸುಂಕ್ರಿತನಿಗೂ, ಪ್ಲೆಗೋನನಿಗೂ, ಹೆರ್ಮೇಯನಿಗೂ, ಪತ್ರೋಬನಿಗೂ, ಹೆರ್ಮಾನನಿಗೂ, ಅವರೊಂದಿಗಿರುವ ಸಹೋದರರಿಗೂ ವಂದನೆಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು