Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸಹೋದರರೇ, ನೀವು ಪಡೆದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರ ಸಹವಾಸವನ್ನೇ ಮಾಡಬೇಡಿರೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಡಕುಗಳನ್ನು ಉಂಟುಮಾಡುವ ಜನರ ವಿಷಯದಲ್ಲಿ ನೀವು ಬಹು ಜಾಗ್ರತೆಯಿಂದ ಇರಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇತರರ ನಂಬಿಕೆಯನ್ನು ಕೆಡಿಸುವಂಥವರ ಬಗ್ಗೆ ಬಹು ಎಚ್ಚರದಿಂದಿರಿ. ನೀವು ಕಲಿತಿರುವ ಉಪದೇಶಕ್ಕೆ ಅವರು ವಿರುದ್ಧವಾಗಿದ್ದಾರೆ. ನೀವು ಅವರಿಂದ ದೂರವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಪ್ರಿಯರೇ, ನೀವು ಕಲಿತುಕೊಂಡ ಬೋಧನೆಗೆ ವಿರೋಧವಾಗಿರುವ ಭೇದಗಳನ್ನೂ ಅಭ್ಯಂತರಗಳನ್ನೂ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರಿಂದ ದೂರವಾಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಭಾವಾನು ಅನಿ ಭೆನಿಯಾನು ತುಮ್ಕಾ ದಿಲ್ಲ್ಯಾ ಶಿಕವ್ನ್ಯಾಚ್ಯಾ ವಿರೊದ್ ತುಮ್ಚ್ಯಾ ಮದ್ದಿ ಭಾಗ್ ಕರ್‍ತಲ್ಯಾ, ಅನಿ ಲೊಕಾಂಚ್ಯಾ ವಿಶ್ವಾಸಾಕ್ ಧಕ್ಕೊ ಹಾನ್ತಲ್ಯಾಂಚ್ಯಾ ವಿಶಯಾತ್ ಉಶಾರ್ಕಿನ್ ರ್‍ಹಾವಾ. ಮನುನ್ ಮಿಯಾ ತುಮ್ಚೆಕ್ಡೆ ವಿನಂತಿ ಕರ್‍ತಾ. ತುಮಿ ತೆಂಚೆಕ್ನಾ ದುರುಚ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:17
25 ತಿಳಿವುಗಳ ಹೋಲಿಕೆ  

ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, ಪ್ರಾಕೃತ ಮನುಷ್ಯರೂ, ದೇವರಾತ್ಮ ಇಲ್ಲದವರೂ ಆಗಿದ್ದಾರೆ.


ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.


ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.


ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.


ಸಭೆಯಲ್ಲಿ ಭಿನ್ನಭೇದಗಳನ್ನುಂಟುಮಾಡುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟು ಬಿಡು;


ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.


ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ,


ಸಹೋದರರೇ, ನೀವೆಲ್ಲರು ನನ್ನೊಂದಿಗೆ ಸೇರಿ ನನ್ನನ್ನು ಅನುಸರಿಸುವವರಾಗಿರಿ ಮತ್ತು ನಾವು ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ.


“ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.


ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?


“ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,


ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.


ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.


ಹೇಗೆಂದರೆ ಮೊದಲನೆಯದಾಗಿ ನೀವು ಸಭೆಯಾಗಿ ಸೇರಿಬರುವಾಗ ನಿಮ್ಮಲ್ಲಿ ಭಿನ್ನತೆ, ಭೇದಗಳು ಉಂಟಾಗುತ್ತವೆಂದು ಕೇಳಿದ್ದೇನೆ. ಮತ್ತು ಇದು ನಿಜವೆಂದು ಸ್ವಲ್ಪ ಮಟ್ಟಿಗೆ ನಂಬುತ್ತೇನೆ.


ಯೇಸು ತನ್ನ ಶಿಷ್ಯರಿಗೆ, “ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?


“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು