Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಂಥ ಜನರು ನಮ್ಮ ಪ್ರಭುವಾದ ಕ್ರಿಸ್ತನ ಸೇವೆ ಮಾಡುತ್ತಿಲ್ಲ. ಅವರು ಕೇವಲ ತಮ್ಮ ಸುಖಕ್ಕಾಗಿ ಈ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೆಟ್ಟದರ ಬಗ್ಗೆ ತಿಳಿದಿಲ್ಲದ ಜನರ ಮನಸ್ಸುಗಳನ್ನು ಮೋಸಗೊಳಿಸುವುದಕ್ಕಾಗಿ ಅವರು ನಯನಾಜುಕಿನ ನುಡಿಗಳನ್ನಾಡುತ್ತಾರೆ ಮತ್ತು ಮುಖಸ್ತುತಿಯ ಮಾತುಗಳನ್ನಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತಸ್ಲಿ ಲೊಕಾ ಕ್ರಿಸ್ತಾ ಅಮ್ಚ್ಯಾ ಧನಿಯಾಚಿ ಸೆವಾ ಕರಿನ್ಯಾತ್, ಗೊಡ್-ಗೊಡ್ ಗೊಸ್ಟಿಯಾನಿ ಅನಿ ಪಶ್ವುತಲ್ಯಾ ಬೊಲ್ನ್ಯಾನಿ ತೆನಿ ವಿಶ್ವಾಸಾತ್ ಬಾರಿಕ್ ಹೊತ್ತ್ಯಾಂಚಿ ಮನಾ ಪಿಸ್ವುನ್ ಟಾಕ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:18
54 ತಿಳಿವುಗಳ ಹೋಲಿಕೆ  

ಯಾರೂ ನಿಮ್ಮನ್ನು ತಮ್ಮ ಮನವೊಲಿಸುವ ಮಾತುಗಳಿಂದ ಮೋಸಗೊಳಿಸದಿರಲಿ ಎಂದು ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.


“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.


ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.


ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ, ತಿನ್ನುವುದಕ್ಕೆ ಕೊಡುವಂಥವರಿಗೆ, “ಸಮಾಧಾನವಿರುವುದು” ಎಂದು ಪ್ರಕಟಿಸುವರು ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ,


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.


ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.


ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.


ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.


ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವುದಿಲ್ಲ.


ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.


ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.


ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವಿರೆಂದು ತಿಳಿದುಕೊಂಡು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿರಿ.


ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.


ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.


ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು.


“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.


ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.’


‘ಇಸ್ರಾಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯಿದೆ ಎಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇಮಿನ ವಿಷಯವಾಗಿ ಪ್ರವಾದಿಸಿದ್ದೀರಲ್ಲವೆ? ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು’” ಇದು ಕರ್ತನಾದ ಯೆಹೋವನ ನುಡಿ.


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.


ಮೂಢನು ಯಾವ ಮಾತನ್ನಾದರೂ ನಂಬುವನು, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.


ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.


ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.


ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.


ಅನಂತರ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಹೋಗಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು.


ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ, ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದೇಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೋ?’


ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು.


ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,


ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.”


ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.


“ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲರಿಗೂ ಅಬ್ಷಾಲೋಮನು ಹೀಗೆಯೇ ಮಾಡಿ, ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು.


ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.


ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವುದು. ಆ ಮೇಲೆ ಬಹಳ ಮಂದಿ ನಯವಾದ ನುಡಿಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು.


ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರನ್ನು ಮೆಚ್ಚಿಸುವವನೂ, ಮನುಷ್ಯರಿಗೆ ಒಳ್ಳೆಯದನ್ನು ಮಾಡುವವನೂ ಆಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು