Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಜ್ಞಾನಾಂಬುದಿಯಾದ ಆ ಏಕೈಕ ದೇವರಿಗೆ ಯೇಸುಕ್ರಿಸ್ತರ ಮುಖಾಂತರ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಒಬ್ಬನೇ ಜ್ಞಾನಿಯಾದ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಶಕ್ತರಾಗಿರುವ ಒಬ್ಬರೇ ಜ್ಞಾನವಂತರಾಗಿರುವ ದೇವರಿಗೆ ಕ್ರಿಸ್ತ ಯೇಸುವಿನ ಮೂಲಕ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಎಕ್ಲ್ಯಾಚ್, ಸಗ್ಳೆ ಗೊತ್ತ್ ಹೊತ್ತ್ಯಾ ದೆವಾಕ್, ಜೆಜು ಕ್ರಿಸ್ತಾಚ್ಯಾ ವೈನಾ ಸದಾ ಸರ್ವತಾಕ್ ಮಹಿಮಾ ಹೊಂವ್ದಿತ್, ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:27
24 ತಿಳಿವುಗಳ ಹೋಲಿಕೆ  

ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.


ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.


ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.


ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.


ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್‍.


ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು.


ನಮ್ಮ ಕರ್ತನು ದೊಡ್ಡವನೂ, ಪರಾಕ್ರಮಿಯೂ ಆಗಿದ್ದಾನೆ, ಆತನ ಜ್ಞಾನವು ಅಪರಿಮಿತವಾಗಿದೆ.


ಇಗೋ, ಆತನು ವಿವೇಕಿ, ತನ್ನ ಮಾತನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು. ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು