Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರ ಮನೆಯಲ್ಲಿ ಸೇರಿಬರುವ ಸಭೆಗೆ ಸಹ ನನ್ನ ವಂದನೆಯನ್ನು ತಿಳಿಸಿರಿ. ಆಸ್ಯ ಸೀಮೆಯಲ್ಲಿ ಕ್ರಿಸ್ತನಿಗೆ ಪ್ರಥಮಫಲವಾಗಿರುವ ನನ್ನ ಪ್ರಿಯನಾದ ಎಫೈನೆತನಿಗೆ ವಂದನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರ ಮನೆಯಲ್ಲಿ ಸೇರುವ ಸಭೆಗೂ ನನ್ನ ಶುಭಾಶಯಗಳು. ನನ್ನ ಆಪ್ತಗೆಳೆಯ ಎಪೈನೆತನಿಗೆ ನನ್ನ ಪ್ರಣಾಮಗಳು; ಏಷ್ಯಾಸೀಮೆಯಲ್ಲಿ ಮೊತ್ತಮೊದಲಿಗೆ ಕ್ರಿಸ್ತಯೇಸುವನ್ನು ವಿಶ್ವಾಸಿಸಿದವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರ ಮನೆಯಲ್ಲಿ ಕೂಡುವ ಸಭೆಗೆ ಸಹ ನನ್ನ ವಂದನೆಯನ್ನು ಹೇಳಿರಿ. ಆಸ್ಯ ಸೀಮೆಯಲ್ಲಿ ಕ್ರಿಸ್ತನಿಗೆ ಪ್ರಥಮಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೆ ವಂದನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಲ್ಲದೆ ಅವರ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ನನ್ನ ವಂದನೆಗಳನ್ನು ತಿಳಿಸಿರಿ. ನನ್ನ ಪ್ರಿಯ ಸ್ನೇಹಿತನಾದ ಎಪೈನೆತನಿಗೆ ನನ್ನ ವಂದನೆ ತಿಳಿಸಿರಿ. ಏಷ್ಯಾದಲ್ಲಿ ಕ್ರಿಸ್ತನನ್ನು ಹಿಂಬಾಲಿಸಿದವರಲ್ಲಿ ಅವನೇ ಮೊಟ್ಟಮೊದಲನೆಯವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರ ಮನೆಯಲ್ಲಿ ಸೇರಿ ಬರುವ ಸಭೆಗೂ ನನ್ನ ವಂದನೆಗಳನ್ನು ತಿಳಿಸಿರಿ. ಏಷ್ಯಾ ಪ್ರಾಂತದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾಗಿರುವ ಎಪೈನೆತನಿಗೂ ನನ್ನ ವಂದನೆಗಳನ್ನು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆಂಚ್ಯಾ ಘರಾತ್ ಗೊಳಾ ಹೊತಲ್ಯಾ ತ್ಯಾ ಪವಿತ್ರ್ ಲೊಕಾಂಚ್ಯಾ ತಾಂಡ್ಯಾಕ್‍ಬಿ ಮಾಜೊ ನಮಸ್ಕಾರ್. ಮಾಜ್ಯಾ ಪ್ರೆಮಾಚ್ಯಾ ದೊಸ್ತಾ ಎಫೈನೆತಾಕ್ ಮಾಜೊ ನಮಸ್ಕಾರ್ ಮನುನ್ ಸಾಂಗ್, ಅಸಿಯಾ ಪ್ರಾಂತ್ಯಾತ್ ಕ್ರಿಸ್ತಾಚೆರ ವಿಶ್ವಾಸ್ ಥವಲ್ಲ್ಯಾತ್ನಿ ಸಗ್ಳ್ಯಾಕ್ನಿ ಪಯ್ಲೆಚೊ ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:5
20 ತಿಳಿವುಗಳ ಹೋಲಿಕೆ  

ಲವೊದಿಕೀಯದಲ್ಲಿರುವ ಸಹೋದರರಿಗೂ ಮತ್ತು ನುಂಫಳಿಗೂ ಹಾಗೂ ಆಕೆಯ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ವಂದನೆ ಹೇಳಿರಿ.


ಮತ್ತು ಸಹೋದರಿಯಾದ ಅಪ್ಫಿಯಳಿಗೂ, ನಮ್ಮ ಸಹ ಹೋರಾಟಗಾರನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ಬರೆಯುವುದೇನಂದರೆ:


ಆಸ್ಯಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡಿ ಬರುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಬಹಳವಾಗಿ ನಿಮ್ಮನ್ನು ವಂದಿಸುತ್ತಿದ್ದಾರೆ.


ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದು ಹಾಗೂ ಅವರು ದೇವಜನರ ಸೇವೆಗೋಸ್ಕರ ತಮ್ಮನ್ನು ಅರ್ಪಿಸಿದ್ದಾರೆಂದು ನೀವು ಬಲ್ಲವರಾಗಿದ್ದೀರಿ.


ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.


ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.


ಸಭೆಯ ಹಿರಿಯನಾದ ನಾನು, ಪೂರ್ಣಹೃದಯದಿಂದ ಪ್ರೀತಿಸುವ ಪ್ರಿಯ ಗಾಯನಿಗೆ ಬರೆಯುವುದೇನಂದರೆ;


ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.


ನಿಮ್ಮ ಮನಸ್ಸಿನ ಬಯಕೆ ಏನೆಂಬುದು ನನಗೆ ಗೊತ್ತುಂಟು. ಕಳೆದ ವರ್ಷದಿಂದಲೂ ಅಖಾಯದವರು ಸಹಾಯಮಾಡುವುದಕ್ಕೆ ಸಿದ್ಧರಾಗಿದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು.


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲಿ ಇರುವ ದೇವಜನರೆಲ್ಲರಿಗೂ ಬರೆಯುವುದೇನಂದರೆ,


ಕರ್ತನ ಸೇವೆಯಲ್ಲಿ ಪ್ರಯಾಸಪಟ್ಟವರಾದ ತ್ರುಫೈನಳಿಗೂ, ತ್ರುಫೋಸಳಗೂ ವಂದನೆಗಳು. ಕರ್ತನ ಸೇವೆಯಲ್ಲಿ ಬಹಳವಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀಸಳಿಗೆ ವಂದನೆ.


ಕರ್ತನಲ್ಲಿ ನನ್ನ ಪ್ರಿಯನಾದ ಅಂಪ್ಲಿಯಾತನಿಗೆ ವಂದನೆ.


ಯಾಕೆಂದರೆ ಯೆರೂಸಲೇಮಿನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬುದಾಗಿ ಮಕೆದೋನ್ಯ, ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.


ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ.


ಆ ಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು.


ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು;


ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,


ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,


ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿಕೊಂಡಿದ್ದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ.


ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು