Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕ್ರಿಸ್ತನ ಸೇವೆಯಲ್ಲಿ ನಮ್ಮ ಜೊತೆ ಕೆಲಸದವನಾದ ಉರ್ಬಾನನಿಗೂ, ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯೇಸುಕ್ರಿಸ್ತರ ಸೇವೆಯಲ್ಲಿ ನನ್ನ ಸಹೋದ್ಯೋಗಿಯಾದ ಉರ್ಬಾನನಿಗೂ ನನ್ನ ಮಿತ್ರ ಸ್ತಾಕುನಿಗೂ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕ್ರಿಸ್ತನ ಸೇವೆಯಲ್ಲಿ ನಮ್ಮ ಜೊತೆ ಕೆಲಸದವನಾದ ಉರ್ಬಾನನಿಗೂ ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಉರ್ಬಾನನಿಗೆ ನನ್ನ ವಂದನೆ ತಿಳಿಸಿರಿ. ಅವನು ಕ್ರಿಸ್ತನಿಗೋಸ್ಕರ ನನ್ನ ಸಹೋದ್ಯೋಗಿಯಾಗಿದ್ದಾನೆ. ನನ್ನ ಪ್ರಿಯ ಗೆಳೆಯನಾದ ಸ್ತಾಖುನಿಗೆ ನನ್ನ ವಂದನೆ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕ್ರಿಸ್ತನಲ್ಲಿ ನನ್ನ ಜೊತೆ ಸೇವಕನಾಗಿರುವ ಉರ್ಬಾನನಿಗೂ ನನಗೆ ಪ್ರಿಯನಾದ ಸ್ತಾಖುನಿಗೂ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಕ್ರಿಸ್ತಾಚ್ಯಾ ಸೆವಾಚ್ಯಾ ಕಾಮಾತ್ ಮಾಜ್ಯಾ ವಾಂಗ್ಡಾ ಕಾಮ್ ಕರಲ್ಲ್ಯಾ ಉರ್ಬಾನಾಕ್ ಅನಿ ಮಾಜ್ಯಾ ಪ್ರಿತಿಚ್ಯಾ ದೊಸ್ತಾ ಸಾಖುಸಾಕ್ ಅನಿ ಮಾಜೊ ನಮಸ್ಕಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:9
9 ತಿಳಿವುಗಳ ಹೋಲಿಕೆ  

ನನ್ನ ಜೊತೆಕೆಲಸದವನಾದ ತಿಮೊಥೆಯನೂ, ನನ್ನ ಸಂಬಂಧಿಕರಾದ ಲೂಕ್ಯನೂ, ಯಾಸೋನನೂ ಮತ್ತು ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ


ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.


ನನ್ನ ಸ್ವಜನರೂ ಹಾಗೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ, ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರಲ್ಲದೆ, ನನಗಿಂತ ಮೊದಲೇ ಕ್ರಿಸ್ತನನ್ನು ನಂಬಿದವರೂ ಆಗಿದ್ದರು.


ಕರ್ತನಲ್ಲಿ ನನ್ನ ಪ್ರಿಯನಾದ ಅಂಪ್ಲಿಯಾತನಿಗೆ ವಂದನೆ.


ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.


ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು. ಅವನು ಹದಿನಾಲ್ಕು ವರ್ಷಗಳ ಹಿಂದೆ ಮೂರನೆಯ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ, ಅಥವಾ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆನು, ದೇವರೇ ಬಲ್ಲನು.


ಆದರೆ ಕ್ರಿಸ್ತನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.


ನನ್ನ ಕೊರತೆಯನ್ನು ನೀಗುವುದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ, ಜೊತೆಸೇವಕನೂ, ಸಹಸೇನಾನಿಯೂ ಆಗಿರುವಂಥ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ಭಾವಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು