Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಧರ್ಮಶಾಸ್ತ್ರವನ್ನು ಆಲಿಸಿದ ಮಾತ್ರಕ್ಕೆ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯಲು ಸಾಧ್ಯವಿಲ್ಲ. ಅದನ್ನು ಆಲಿಸುವುದರ ಜೊತೆಗೆ ಪಾಲಿಸಲೂ ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಧರ್ಮಶಾಸ್ತ್ರ ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಧರ್ಮಶಾಸ್ತ್ರವನ್ನು ಕೇಳಿದ ಮಾತ್ರಕ್ಕೆ ಜನರು ನೀತಿವಂತರಾಗುವುದಿಲ್ಲ. ಧರ್ಮಶಾಸ್ತ್ರ ಹೇಳುವ ಪ್ರತಿಯೊಂದಕ್ಕೂ ವಿಧೇಯರಾಗುವ ಜನರನ್ನು ಧರ್ಮಶಾಸ್ತ್ರವು ನೀತಿವಂತರನ್ನಾಗಿ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯಾರೂ ನಿಯಮವನ್ನು ಕೇಳಿದ ಮಾತ್ರಕ್ಕೆ ದೇವರ ಮುಂದೆ ನೀತಿವಂತರಾಗುವುದಿಲ್ಲ. ಆದರೆ ನಿಯಮಕ್ಕೆ ವಿಧೇಯರಾಗುವವರೇ ನೀತಿವಂತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖಾಲಿ ಖಾಯ್ದೆ ಆಯ್ಕಲ್ಲ್ಯಾ ವೈನಾ ಲೊಕಾ ದೆವಾಚ್ಯಾ ನದ್ರೆತ್ ಭಕ್ತಿವಂತ್ ಹೊಯ್‍ನ್ಯಾತ್, ಖಾಯ್ದ್ಯಾತ್ನಿ ಕಾಯ್ ಸಾಂಗಲ್ಲೆ ಹಾಯ್ ತೆ ಪಾಳಲ್ಲ್ಯಾ ವೈನಾ ಲೊಕಾ ನಿತಿವಂತ್ ಹೊತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:13
29 ತಿಳಿವುಗಳ ಹೋಲಿಕೆ  

ಪ್ರಿಯರಾದ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.


ನೀನು ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ನಿನಗೆ ಪ್ರಯೋಜನಕರವಾಗಿದೆ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.


ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.


ಆತನು ನೀತಿವಂತನಾಗಿದ್ದಾನೆಂಬುದು ನಿಮಗೆ ತಿಳಿದಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನೆಂದು ನೀವು ಬಲ್ಲವರಾಗಿರುತ್ತೀರಿ.


ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.


ಆತನು ಅವರಿಗೆ, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ” ಎಂದು ಉತ್ತರಕೊಟ್ಟನು.


ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ.


ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.


ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.


ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.


ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, “ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.


ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ನಿಮ್ಮಲ್ಲಿ ಯಾರಾರು ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿಹೋದವರಾಗಿದ್ದೀರಿ. ಕೃಪೆಯಿಂದ ಬಿದ್ದಹೋದವರಾಗಿದ್ದೀರಿ.


ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.


ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.


ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.


ಯೆಹೋವನು ನನಗೆ, “ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು, ‘ಈ ನಿಬಂಧನ ವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ.


ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಿಗೆ ತೋರುವುದಿಲ್ಲವಾದರೂ ನಾನು ನಿರ್ದೋಷಿಯೆಂದು ನಿರ್ಣಯಿಸುವಂತಿಲ್ಲ. ನನ್ನನ್ನು ನ್ಯಾಯವಿಚಾರಣೆ ಮಾಡುವವನು ಕರ್ತನೇ.


ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು