Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಧರ್ಮಶಾಸ್ತ್ರದಿಂದ ಉಪದೇಶವನ್ನು ಹೊಂದಿ, ಆತನ ಚಿತ್ತವನ್ನು ಬಲ್ಲವನೂ, ಇದು ತಕ್ಕದ್ದು ಅದು ತಕ್ಕದ್ದಲ್ಲವೆಂದು ವಿವೇಚಿಸುವವನೂ ಆಗಿದ್ದೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದೇವರ ಚಿತ್ತವನ್ನು ಅರಿತಿರುವುದಾಗಿ ನೆನೆಸುತ್ತೀಯೆ: ಉತ್ತಮವಾದುದನ್ನು ಆರಿಸಿಕೊಳ್ಳಲು ಧರ್ಮಶಾಸ್ತ್ರದಿಂದ ಕಲಿತುಕೊಂಡಿರುವುದಾಗಿ ಹೇಳಿಕೊಳ್ಳುತ್ತೀಯೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನ ಚಿತ್ತವನ್ನು ಬಲ್ಲವನೂ ಧರ್ಮಶಾಸ್ತ್ರದಿಂದ ಉಪದೇಶವನ್ನು ಹೊಂದಿ ಇದು ತಕ್ಕದ್ದು ಅದು ತಕ್ಕದ್ದಲ್ಲವೆಂದು ವಿವೇಚಿಸುವವನೂ ಆಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರ ಚಿತ್ತಕ್ಕನುಸಾರವಾದ ಕಾರ್ಯಗಳನ್ನು ಧರ್ಮಶಾಸ್ತ್ರದಿಂದ ಕಲಿತುಕೊಂಡಿರುವುದಾಗಿ ನೀನು ಹೇಳಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೇವರ ಚಿತ್ತವನ್ನು ಬಲ್ಲವನೂ ನಿಯಮದಿಂದ ಉಪದೇಶವನ್ನು ಹೊಂದಿ ಯಾವುದು ಉತ್ತಮವಾದದ್ದೆಂದು ಅನುಮೋದಿಸುವವನೂ ಆಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ದೆವಾಕ್ ತುಮಿ ಕಾಯ್ ಕರಲ್ಲೆ ಪಾಜೆ ಮನ್ತಲೆ ತುಕಾ ಗೊತ್ತ್ ಹಾಯ್, ಅನಿ ಖಾಯ್ದ್ಯಾಂಚ್ಯಾ ವೈನಾ ಖಲೆ ಸಮಾ ಹಾಯ್ ತೆ ಎಚುನ್ ಘೆತಲೆ ತಿಯಾ ಶಿಕಲ್ಲೆ ಹಾಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:18
19 ತಿಳಿವುಗಳ ಹೋಲಿಕೆ  

ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.


ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ.


ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ,


ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಇಂಥ ನ್ಯಾಯವಾದ ಆಜ್ಞಾವಿಧಿಗಳುಳ್ಳ ಈ ಧರ್ಮಶಾಸ್ತ್ರಕ್ಕೆ ಸಮಾನವಾದದ್ದು ಬೇರೆ ಯಾವ ಜನಾಂಗಕ್ಕೆ ಉಂಟು?


ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ, ಅಂದರೆ ತಪ್ಪು ಮತ್ತು ಸರಿಯಾದ್ದದನ್ನು ಗುರುತಿಸಲು, ಅಭ್ಯಾಸದ ಮೂಲಕ ನೈಪುಣ್ಯತೆಯನ್ನು ಹೊಂದಿದವರಿಗೋಸ್ಕರವಾಗಿದೆ.


ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.


ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು.


ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.


ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.


ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.


ನಿನಗೆ ಉಪದೇಶಿಸಿರುವ ವಿಷಯಗಳು ಸತ್ಯವಾದವುಗಳೆಂದು ಇದರಿಂದ ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬಹುದು.


ಧರ್ಮಶಾಸ್ತ್ರದಲ್ಲಿ ಜ್ಞಾನಸತ್ಯಗಳ ಸ್ವರೂಪವೇ ನಿನಗೆ ತಿಳಿದಿರುವುದರಿಂದ ಕುರುಡರಿಗೆ ದಾರಿತೋರಿಸುವವನೂ, ಕತ್ತಲೆಯಲ್ಲಿರುವವರಿಗೆ ಬೆಳಕೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು