Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತಿಳಿವಳಿಕೆಯಿಲ್ಲದವರಿಗೆ ಶಿಕ್ಷಕನೂ, ಬಾಲಕರಿಗೆ ಉಪಾಧ್ಯಾಯನೂ, ಆಗಿದ್ದೇನೆಂದು ನಂಬಿಕೊಂಡಿದ್ದಿಯೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮಕ್ಕಳಿಗೆ ಶಿಕ್ಷಕನೂ ಆಗಿರುವುದಾಗಿ ದೃಢವಾಗಿ ನಂಬಿಕೊಂಡಿದ್ದೀಯೆ; ಧರ್ಮಶಾಸ್ತ್ರದಲ್ಲಿ ಜ್ಞಾನ ಮತ್ತು ಸತ್ಯ ಮೇಳೈಸಿರುವುದಾಗಿ ಭಾವಿಸುತ್ತೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕತ್ತಲೆಯಲ್ಲಿರುವವರಿಗೆ ಬೆಳಕೂ ತಿಳುವಳಿಕೆಯಿಲ್ಲದವರಿಗೆ ಶಿಕ್ಷಕನೂ ಬಾಲಕರಿಗೆ ಉಪಾಧ್ಯಾಯನೂ ಆಗಿದ್ದೇನೆಂದು ನಂಬಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮೂಢರಿಗೆ ಶಿಕ್ಷಕನೆಂತಲೂ ಕಲಿಯಬೇಕಾದವರಿಗೆ ಉಪಾಧ್ಯಾಯನೆಂತಲೂ ನೀನು ನಿನ್ನ ಬಗ್ಗೆ ಆಲೋಚಿಸಿಕೊಂಡಿರುವೆ. ನಿನ್ನಲ್ಲಿ ಧರ್ಮಶಾಸ್ತ್ರವಿದೆ, ಆದ್ದರಿಂದ ಪ್ರತಿಯೊಂದನ್ನೂ ತಿಳಿದುಕೊಂಡಿರುವುದಾಗಿಯೂ ಎಲ್ಲಾ ಸತ್ಯವನ್ನು ಹೊಂದಿಕೊಂಡಿರುವುದಾಗಿಯೂ ನೀನು ಭಾವಿಸಿಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ತಿಳುವಳಿಕೆಯಿಲ್ಲದವರಿಗೆ ಶಿಕ್ಷಕನೂ ಬಾಲಕರಿಗೆ ಉಪಾಧ್ಯಾಯನೂ ಆಗಿದ್ದೀಯೆಂದು ಧೈರ್ಯವಾಗಿದ್ದೀಯಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಎಕ್ ಪಿಶ್ಯಾಕ್ ಬುದ್ ಸಾಂಗ್ತಲೊ, ವಳಕ್‍ ನಸಲ್ಲ್ಯಾ ಲೊಕಾಕ್ನಿ ಎಕ್ ಶಿಕ್ಚುತಲೊ ತಿಯಾ. ತುಕಾ ಖಾಯ್ದ್ಯಾಚ್ಯಾ ವಿಶಯಾತ್ ಸಗ್ಳೆ ಗೊತ್ತ್ ಹಾಯ್, ಖಾಯ್ದ್ಯಾನಿತ್ಲೆ ಖರೆ ಅನಿ ತೆಂಚೊ ಸಗ್ಳೊ ಅರ್ತ್ ತುಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:20
11 ತಿಳಿವುಗಳ ಹೋಲಿಕೆ  

ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.


ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.


ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ ಸ್ವಸ್ಥಬೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು.


ಆದರೆ ಸಹೋದರರೇ ನಾನಂತೂ ಆತ್ಮೀಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು.


ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,


ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ.


ಹಾಲು ಕುಡಿಯುವವನು ಕೂಸಿನಂತಿದ್ದು ನೀತಿಯ ಸಂದೇಶದಲ್ಲಿ ಅನುಭವ ಇಲ್ಲದವನಾಗಿದ್ದಾನೆ.


ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಧರ್ಮಶಾಸ್ತ್ರದಲ್ಲಿ ಜ್ಞಾನಸತ್ಯಗಳ ಸ್ವರೂಪವೇ ನಿನಗೆ ತಿಳಿದಿರುವುದರಿಂದ ಕುರುಡರಿಗೆ ದಾರಿತೋರಿಸುವವನೂ, ಕತ್ತಲೆಯಲ್ಲಿರುವವರಿಗೆ ಬೆಳಕೂ,


ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ.


ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು