Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಧರ್ಮಶಾಸ್ತ್ರದಲ್ಲಿ ಹೆಮ್ಮೆಯಿಂದ ಹೆಚ್ಚಳಪಡುವ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದು ದೇವರನ್ನು ಅವಮಾನಪಡಿಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ದೇವರಿಂದಲೇ ನಿಯಮಗಳನ್ನು ಪಡೆದಿರುವುದಾಗಿ ಕೊಚ್ಚಿಕೊಳ್ಳುವ ನೀನು ಆ ನಿಯಮಗಳನ್ನೇ ಉಲ್ಲಂಘಿಸಿ ದೇವರಿಗೆ ದ್ರೋಹಬಗೆಯುತ್ತೀಯೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಧರ್ಮಶಾಸ್ತ್ರದಲ್ಲಿ ಅಭಿಮಾನಿಯಾಗಿರುವ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದು ದೇವರನ್ನು ಅವಮಾನಪಡಿಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀನು ದೇವರ ಧರ್ಮಶಾಸ್ತ್ರದ ಬಗ್ಗೆ ಹೆಮ್ಮೆಪಡುವೆ. ಆದರೆ ಆ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೇವರಿಗೆ ಅವಮಾನ ಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿಯಮದ ಬಗ್ಗೆ ಹೆಚ್ಚಳ ಪಡುವ ನೀನು ನಿಯಮವನ್ನು ಮೀರಿ ನಡೆದು ದೇವರನ್ನು ಅವಮಾನ ಪಡಿಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತಿಯಾ ದೆವಾಚ್ಯಾ ಖಾಯ್ದ್ಯಾಂಚ್ಯಾ ವಿಶಯಾತ್ ಮೊಟೆಪಾನ್ ಸಾಂಗ್ತೆ, ಖರೆ ಖಾಯ್ದೊ ಮೊಡುನ್ ತಿಯಾ ದೆವಾಕ್ ಅವ್ಮಾನ್ ಕರಿನೆ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:23
14 ತಿಳಿವುಗಳ ಹೋಲಿಕೆ  

ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ,


ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.


ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ.


ನಾನು ತಂದೆಯ ಮುಂದೆ ನಿಮ್ಮ ಮೇಲೆ ಅಪವಾದ ಹೊರಿಸುತ್ತಿದ್ದೇನೆಂದು ತಿಳಿಯಬೇಡಿರಿ. ನಿಮ್ಮ ಮೇಲೆ ಅಪವಾದ ಹೊರಿಸುವವನು ಒಬ್ಬನಿದ್ದಾನೆ; ಅವನೇ ನೀವು ನಿರೀಕ್ಷೆಯಿಟ್ಟಿರುವ ಮೋಶೆ!


ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.


ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.


ಏಳನೆಯ ದಿನದಲ್ಲಿ ಯಾಜಕನು ಪರೀಕ್ಷಿಸುವಾಗ ಆ ಗಾಯ ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಭಾಗದಲ್ಲಿ ಹಳದಿ ಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆಹೋದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು