Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಬಾಹ್ಯಾಚರಣೆಯಲ್ಲಿ ಮಾತ್ರ ಯೆಹೂದ್ಯನಾಗಿರುವವನು ನಿಜವಾದ ಯೆಹೂದ್ಯನಲ್ಲ. ಅಂತೆಯೇ, ನಿಜವಾದ ಸುನ್ನತಿಯು ಕೇವಲ ಬಾಹ್ಯಲಕ್ಷಣವುಳ್ಳ ಶಾರೀರಿಕ ಪದ್ಧತಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಕೇವಲ ಬಾಹ್ಯ ದೇಹದಲ್ಲಿ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ. ಕೇವಲ ದೇಹದ ಹೊರಭಾಗದ ಸುನ್ನತಿಯು ನಿಜವಾದ ಸುನ್ನತಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ. ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಅಶೆ ರಾತಾನಾ, ಖರೆಚ್ ಸುನ್ನತ್ ಕರಲ್ಲೊ, ಖರೊ ಜುದೆವ್ ಕೊನ್? ಭಾಯ್ನಾ ಖಾಲಿ ಜುದೆವ್ ಮನುನ್ ದಾಕ್ವುತಲೊ ಜುದೆವ್ ನ್ಹಯ್, ಖಾಲಿ ಆಂಗಾಕ್ ಪದ್ದತಿ ಪರ್‍ಕಾರ್ ಕರುನ್ ಘೆಟಲ್ಲಿ ಸುನ್ನತ್ , ಸುನ್ನತ್ ನ್ಹಯ್ ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:28
17 ತಿಳಿವುಗಳ ಹೋಲಿಕೆ  

ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಏನು ಅಲ್ಲ, ಆದರೆ ಹೊಸ ಸೃಷ್ಟಿಯಾಗುವುದೇ ಪ್ರಮುಖವಾದುದು.


ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.


ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿದ್ದಾರೆ.


ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.


ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ,


ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ, ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.


ಏಕೆಂದರೆ ಸಕಲ ಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ನುಡಿಯುತ್ತಾನೆ.


ದೇವರು ನಿರ್ಮಲಚಿತ್ತರಾದ ಇಸ್ರಾಯೇಲರಿಗೆ ದಯಾಪರನೇ ಹೌದು.


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ.


“ಆಹಾ, ಐಗುಪ್ತರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೋವಾಬ್ಯರು, ಚಂಡಿಕೆಯನ್ನು ಬಿಟ್ಟುಕೊಂಡಿರುವ ಅರಣ್ಯದ ನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ.


ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು