Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಎಲ್ಲರೂ ದಾರಿತಪ್ಪಿ ನಡೆಯುತ್ತಾ, ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರಿದರು ದೂರ, ದೇವರಿಂದ ದೂರ ದಾರಿತಪ್ಪಿ ನಡೆದರೆಲ್ಲರೂ ಬಲುದೂರ ಒಳಿತನು ಮಾಳ್ಪರೊರ್ವನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಎಲ್ಲರೂ ದಾರಿತಪ್ಪಿ ನಡೆಯುತ್ತಾರೆ, ಎಲ್ಲರೂ ಕೆಲಸಕ್ಕೆ ಬಾರದವರಾದರು. ಒಳ್ಳೇದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಎಲ್ಲಾ ಜನರು ದಾರಿ ತಪ್ಪಿದ್ದಾರೆ. ಎಲ್ಲಾ ಜನರು ಅಯೋಗ್ಯರಾಗಿದ್ದಾರೆ. ಒಳ್ಳೆಯದನ್ನು ಮಾಡುವ ಒಬ್ಬನೂ ಇಲ್ಲ. ಇಲ್ಲವೇ ಇಲ್ಲ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಲಸಕ್ಕೆ ಬಾರದವರಾಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ ಒಬ್ಬನಾದರೂ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಸಗ್ಳೆ ಜಾನಾ ದೆವಾಕ್ನಾ ಫಾಟಿ ಗೆಲ್ಯಾತ್; ತೆನಿ ಸಗ್ಳೆ ಜಾನಾ ಉಪಯೊಗಾಕ್ ಪಡ್ಲ್ಯಾತ್, ಕೊನ್‍ಬಿ ಎಕ್ಲೊ ಸೈತ್ ಬರೆ ಕರ್‍ತಲೊ ನಾ, ನಾಚ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:12
22 ತಿಳಿವುಗಳ ಹೋಲಿಕೆ  

ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಪ್ರತಿಯೊಬ್ಬನೂ ದಾರಿತಪ್ಪಿದವನು, ಎಲ್ಲರೂ ಕೆಟ್ಟು ಹೋದವರೇ.


ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ, ತಮ್ಮ ಮಾರ್ಗಗಳನ್ನು ಡೊಂಕು ಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವವರು ಸಮಾಧಾನವನ್ನು ಅರಿಯರು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ.


ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.


ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ.


ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.


ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.


ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.


ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.


ಒಳ್ಳೆಯದನ್ನು ನಡೆಸುವವರು ಒಬ್ಬರೂ ಇಲ್ಲ; ಅವರೆಲ್ಲರೂ ದ್ರೋಹಿಗಳಾಗಿ ಕೆಟ್ಟುಹೋದವರೇ.


ತಿಳಿವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನು ಇಲ್ಲ.


ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ಅವರ ತುಟಿಯ ಹಿಂದೆ ಹಾವಿನ ವಿಷವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು