Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಈಗಲಾದರೋ ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಈಗಲಾದರೋ ಧರ್ಮಶಾಸ್ತ್ರದ ನೆರವಿಲ್ಲದೆಯೇ ದೇವರಿಂದ ದೊರಕುವ ಸತ್ಸಂಬಂಧವು ಪ್ರಕಟವಾಗಿದೆ. ಇದಕ್ಕೆ ಧರ್ಮಶಾಸ್ತ್ರವೂ ಪ್ರವಾದನಾಗ್ರಂಥವೂ ಸಾಕ್ಷಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಈಗಲಾದರೋ ದೇವರಿಂದ ದೊರಕುವ ನೀತಿಯು ಧರ್ಮಶಾಸ್ತ್ರನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ಈಗ ದೇವರು ಧರ್ಮಶಾಸ್ತ್ರದ ನೆರವಿಲ್ಲದೆಯೇ ಜನರನ್ನು ನೀತಿವಂತರನ್ನಾಗಿ ಮಾಡುವ ಮಾರ್ಗವನ್ನು ತೋರಿಸಿದ್ದಾನೆ. ಧರ್ಮಶಾಸ್ತ್ರ ಮತ್ತು ಪ್ರವಾದಿಗಳು ಈ ಹೊಸ ಮಾರ್ಗದ ಬಗ್ಗೆ ನಮಗೆ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಈಗ ನಿಯಮವಿಲ್ಲದೆ ದೇವರ ನೀತಿಯು ಪ್ರಕಟವಾಗಿದೆ. ಅದಕ್ಕೆ ನಿಯಮವೂ ಪ್ರವಾದಿಗಳೂ ಸಾಕ್ಷಿಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಖರೆ ಅತ್ತಾ ಲೊಕಾಕ್ನಿ ಖಾಯ್ದೆ ನಸ್ತಾನಾ ಭಕ್ತಿವಂತ್ ಮನುನ್ ದಾಕ್ವುನ್ ದಿತಲಿ ವಾಟ್ ದೆವಾನ್ ಅಪ್ನಿಚ್ ದಾಕ್ವುನ್ ದಿಲ್ಯಾನಾಯ್. ಹೆಕಾ ಮೊಯ್ಜೆಚೆ ಖಾಯ್ದೆ ಅನಿ ಪ್ರವಾದಿ ಸೈತ್ ಅಪ್ನಾಚಿ ಸಾಕ್ಷಿ ದಿತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:21
37 ತಿಳಿವುಗಳ ಹೋಲಿಕೆ  

ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇಮಿನವರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ‘ನಮ್ಮ ಸದ್ಧರ್ಮ’ ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವುದು.”


ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.


ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು. ನನ್ನ ರಕ್ಷಣಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.”


ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.


ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು.


ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.


ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ಹಾಗು ದೇವಜನರಾಗುವುದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವ ಪತ್ರ;


ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು” ಎಂದು ಹೇಳಿದನು.


ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”


ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,


ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.


ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ.


ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.


ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.


ಅಬ್ರಾಮನು ಯೆಹೋವನನ್ನು ನಂಬಿದನು; ಯೆಹೋವನು ಅವನ ನಂಬಿಕೆಯನ್ನು ಅವನ ಲೆಕ್ಕಕ್ಕೆ ನೀತಿಯೆಂದು ಪರಿಗಣಿಸಿದನು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.


ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು.


ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.


ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.


ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ


ಅಪರಾಧ ನಿರ್ಣಯಕ್ಕೆ ಸಾಧನವಾಗಿರುವ ಸೇವೆಯು ಮಹಿಮೆಹೊಂದಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನೆಷ್ಟೋ ಅಧಿಕ ಮಹಿಮೆಯುಳ್ಳದ್ದಾಗಿ ಇರತ್ತದಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು