ರೋಮಾಪುರದವರಿಗೆ 3:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಯೇಸುಕ್ರಿಸ್ತರಲ್ಲಿ ವಿಶ್ವಾಸವಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರನ್ನೂ ದೇವರು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ದೇವರಿಂದಾಗುವ ಆ ನೀತಿಯು ಯಾವದಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ ನಂಬುವವರೆಲ್ಲರಿಗೆ ದೊರಕುವಂಥದು. ಹೆಚ್ಚುಕಡಿಮೆ ಏನೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ದೆವ್ ಲೊಕಾಕ್ನಿ ಜೆಜು ಕ್ರಿಸ್ತಾ ವರ್‍ತಿ ತೆಂಕಾ ಹೊತ್ತ್ಯಾ ವಿಶ್ವಾಸಾಚ್ಯಾ ವೈನಾ ತೆನಿ ಭಕ್ತಿವಂತ್ ಮನುನ್ ಠರ್‍ವುತಾ. ದೆವಾನ್ ಹೆ ಕ್ರಿಸ್ತಾ ವರ್‍ತಿ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಕ್ನಿ ಕರ್‍ಲ್ಯಾನಾಯ್, ಕಶ್ಯಾಕ್ ಮಟ್ಲ್ಯಾರ್, ಥೈ ಕಸ್ಲೊಬಿ ಅಂತರ್ ನಾ. ಅಧ್ಯಾಯವನ್ನು ನೋಡಿ |
ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.