ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.
ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.
ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು.
ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.
ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.
ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು.
ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.
ಆದರೂ ಒಬ್ಬನು; “ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು” ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ.