Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹಾಗಾದರೆ ವಂಶಾನುಕ್ರಮವಾಗಿ ನಮಗೆ ಮೂಲಪಿತೃವಾಗಿರುವ ಅಬ್ರಹಾಮನು ಈ ವಿಷಯದಲ್ಲಿ ಏನು ಪಡೆದುಕೊಂಡನೆಂದು ಹೇಳಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹಾಗಾದರೆ, ವಂಶಾನುಕ್ರಮವಾಗಿ ನಮ್ಮ ಮೂಲಪಿತನಾದ ಅಬ್ರಹಾಮನ ಅನುಭವವನ್ನು ಕುರಿತು ಏನು ಹೇಳೋಣ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹಾಗಾದರೆ ವಂಶಾನುಕ್ರಮವಾಗಿ ನಮಗೆ ಮೂಲಪಿತೃವಾಗಿರುವ ಅಬ್ರಹಾಮನು ಏನು ಪಡಕೊಂಡನೆಂದು ಹೇಳಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹಾಗಾದರೆ, ನಮ್ಮ ಪಿತೃವಾದ ಅಬ್ರಹಾಮನ ಬಗ್ಗೆ ನಾವು ಏನು ಹೇಳೋಣ? ಅವನು ನಂಬಿಕೆಯ ಬಗ್ಗೆ ಏನು ಕಲಿತುಕೊಂಡನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹಾಗಾದರೆ ವಂಶಾನುಕ್ರಮವಾಗಿ ನಮ್ಮ ಮೂಲ ಪಿತೃವಾಗಿರುವ ಅಬ್ರಹಾಮನು, ಈ ವಿಷಯದಲ್ಲಿ ಏನು ಕಂಡುಕೊಂಡನೆಂದು ಹೇಳಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತಸೆ ಹೊಲ್ಯಾರ್ ಅಮ್ಚ್ಯಾ ಕುಳಿಚ್ಯಾ ಬಾಬಾ ಅಬ್ರಾಹಾಮಾಚ್ಯಾ ವಿಶಯಾತ್ ಅಮಿ ಕಾಯ್ ಮನುಕ್ ಹೊತಾ? ವಿಶ್ವಾಸಾಚ್ಯಾ ವಿಶಯಾತ್ ತೆಚೊ ಅನ್ಬೊಗ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:1
18 ತಿಳಿವುಗಳ ಹೋಲಿಕೆ  

ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.


ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.


ಅವರು ಇಬ್ರಿಯರೋ? ನಾನೂ ಇಬ್ರಿಯನು. ಅವರು ಇಸ್ರಾಯೇಲ್ಯರೋ? ನಾನೂ ಇಸ್ರಾಯೇಲ್ಯನು. ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು.


“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.


ನಿಮ್ಮ ಮೂಲಪುರುಷನಾದ ಅಬ್ರಹಾಮನು ನನ್ನ ದಿನವನ್ನು ತಾನು ನೋಡುತ್ತೇನೆಂದು ಉಲ್ಲಾಸಪಟ್ಟನು ಮತ್ತು ಅದನ್ನು ನೋಡಿ ಸಂತೋಷಪಟ್ಟನು” ಎಂದು ಹೇಳಿದನು.


ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.


ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ಸತ್ತುಹೋದ ನಮ್ಮ ತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು, ನಿನ್ನನ್ನೇ ನೀನು ಯಾರೆಂದು ಭಾವಿಸಿಕೊಳ್ಳುತ್ತಿದ್ದೀ?” ಎಂದು ಕೇಳಿದರು.


ಅದಕ್ಕವರು ಆತನಿಗೆ, “ನಾವು ಅಬ್ರಹಾಮನ ಸಂತಾನದವರು ಮತ್ತು ನಾವು ಎಂದೂ ಯಾರಿಗೂ ದಾಸರಾಗಿಲ್ಲ, ನಿಮಗೆ ಬಿಡುಗಡೆಯಾಗುವುದೆಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು.


ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಲ್ಲವೇ’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?


ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು.


ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.


ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು