Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅನಂತರ ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತಾನು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಅಬ್ರಹಾಮನು ಇಟ್ಟ ವಿಶ್ವಾಸದಿಂದಾಗಿ ದೇವರು ಆತನನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡರು. ಅನಂತರವೇ ಆತನು ಸುನ್ನತಿಯನ್ನು ಗುರುತಾಗಿಯೂ ಮುದ್ರೆಯನ್ನಾಗಿಯೂ ಪಡೆದನು. ಹೀಗೆ, ಸುನ್ನತಿ ಮಾಡಿಸಿಕೊಳ್ಳದಿದ್ದರೂ ವಿಶ್ವಾಸಿಸುವ ಎಲ್ಲರಿಗೆ ದೇವರೊಡನೆ ಸತ್ಸಂಬಂಧ ದೊರಕುವಂತೆ ಅಬ್ರಹಾಮನು ಮೂಲಪಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಮೇಲೆ ಸುನ್ನತಿಯೆಂಬ ಸಂಸ್ಕಾರವನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾದ ನೀತಿಗೆ ಮುದ್ರೆಯಾಗಿತ್ತು. ಹೀಗಿರುವದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾದಾಗ್ಯೂ ಮೂಲತಂದೆಯಾದನು; ಅವರೂ ನೀತಿವಂತರೆಂದು ಎಣಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹೌದು, ಸುನ್ನತಿಯಾಗುವ ಮೊದಲೇ ಅಬ್ರಹಾಮನಿಗಿದ್ದ ನಂಬಿಕೆಯಿಂದ ಅವನು ನೀತಿಯ ಮುದ್ರೆಯನ್ನು ಹೊಂದಿದನು. ಹೀಗಿರುವಲ್ಲಿ, ಸುನ್ನತಿಯಿಲ್ಲದೆ ನಂಬುವವರೆಲ್ಲರಿಗೂ ಅಬ್ರಹಾಮನು ತಂದೆಯಾಗಿರುತ್ತಾನೆ. ಹೀಗೆ ಅವರಿಗೆ ನೀತಿಯು ಎಣಿಕೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಾನಾ ತೆಚಿ ಸುನ್ನತ್ ಕರುನ್ ಹೊಲಿ, ಅನಿ ತೆಚಿ ಸುನ್ನತ್ ದೆವಾನ್ ತೆಕಾ ಸುನ್ನತ್ ಹೊವ್ಚ್ಯಾ ಅದ್ದಿಚ್ ತೆಚ್ಯಾ ವಿಶ್ವಾಸಾಕ್‍ ಲಾಗುನ್ ತೊ ಖರ್ಯ್ಯಾ ವಾಟೆನ್ ಚಲ್ತಲೊ ಮನುನ್ ಎಚುನ್ ಕಾಡಲ್ಲ್ಯಾಚಿ ಎಕ್ ವಳಕ್ ಹೊಲ್ಲಿ. ತೆಚೆ ಸಾಟ್ನಿ ಅಬ್ರಾಹಾಮ್ ಸುನ್ನತ್ ಕರುನ್ ಘೆಯ್ ನಸಲ್ಲೆ ರ್‍ಹಾಲ್ಯಾರ್‍ಬಿ ದೆವಾನ್ ತೆಚ್ಯಾ ವೈನಾ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಘೆಟಲ್ಲ್ಯಾ, ಅನಿ ದೆವಾಚ್ಯಾ ವರ್‍ತಿ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾ ಲೊಕಾಂಚೊ ಆತ್ಮಿಕ್ ಬಾಬಾ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:11
46 ತಿಳಿವುಗಳ ಹೋಲಿಕೆ  

ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


ಇದನ್ನು ಕೇಳಿ ಯೇಸು, “ಈಹೊತ್ತು ಈ ಮನೆಗೆ ರಕ್ಷಣೆಯಾಯಿತು. ಇವನು ಸಹ ಅಬ್ರಹಾಮನ ವಂಶದವನಲ್ಲವೇ.


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ಆತನು ನಮ್ಮ ಮೇಲೆ ತನ್ನ ಮುದ್ರೆಯನ್ನೊತ್ತಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಖಾತರಿಯಾಗಿ ಅನುಗ್ರಹಿಸಿದ್ದಾನೆ.


ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.


ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ.


ಈ ನಿಯಮಗಳನ್ನು ಸರಿಯಾಗಿ ನಡೆಯುವವರೆಲ್ಲರಿಗೂ ಮತ್ತು ದೇವರ ಇಸ್ರಾಯೇಲ್ಯರಿಗೆ ಶಾಂತಿಯೂ, ಕರುಣೆಯೂ ಉಂಟಾಗಲಿ.


ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ.


ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.


ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.


ಆದ್ದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿರಿ.


“ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.


ಆದರೆ ನಂಬಿಕೆಯಿಂದುಂಟಾಗುವ ನೀತಿಯು ಈ ರೀತಿಯಾಗಿ ಹೇಳುತ್ತದೆ. “‘ಕ್ರಿಸ್ತನನ್ನು ಭೂಮಿಗಿಳಿಸಿಕೊಂಡು ಬರುವುದಕ್ಕಾಗಿ ಮೇಲಣ ಲೋಕಕ್ಕೆ ಏರಿಹೋದವರಾರು?’


ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.


ಯೇಸು ಅವರಿಗೆ “ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂ ಬಾಯಾರಿಕೆಯಾಗುವುದಿಲ್ಲ.


ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,


ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು.


ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ.


ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು.


ಅದಕ್ಕವರು ಆತನಿಗೆ, “ನಾವು ಅಬ್ರಹಾಮನ ಸಂತಾನದವರು ಮತ್ತು ನಾವು ಎಂದೂ ಯಾರಿಗೂ ದಾಸರಾಗಿಲ್ಲ, ನಿಮಗೆ ಬಿಡುಗಡೆಯಾಗುವುದೆಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು.


ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.


ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು.


ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”


ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.


ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;


ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ಪರಿಶುದ್ಧ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ಮತ್ತು ನನಗೂ ಗುರುತಾಗಿರುವುವು” ಎಂದು ಹೇಳಿದೆನು.


ಇದಲ್ಲದೆ ತಮ್ಮನ್ನು ಪರಿಶುದ್ಧ ಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ, ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ಗುರುತಾಗಿ ನೇಮಿಸಿದೆನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.


ಇದು ನನಗೂ ಇಸ್ರಾಯೇಲರಿಗೂ ನಡುವೆಯಿರುವ ಸದಾಕಾಲದ ಗುರುತು. ಏಕೆಂದರೆ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೇ ವಿಶ್ರಮಿಸಿಕೊಂಡನಲ್ಲವೇ?”


“ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ: ನಾನು ನೇಮಿಸಿದ ಪವಿತ್ರ ಸಬ್ಬತ್ ದಿನಗಳನ್ನು ನೀವು ತಪ್ಪದೇ ಆಚರಿಸಬೇಕು. ನಿಮ್ಮನ್ನು ಶುದ್ಧಿಪಡಿಸುವ ಯೆಹೋವನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರ ಮಧ್ಯ ಇರುವ ಗುರುತು.


ಆದರೆ ನೀವು ಇರುವ ಎಲ್ಲಾ ಮನೆಗಳ ಬಾಗಿಲಿಗೆ ಹಚ್ಚಿರುವ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ ನಿಮಗೆ ಯಾವ ನಷ್ಟವನ್ನೂ ಮಾಡದೇ ಮುಂದಕ್ಕೆ ದಾಟಿಹೋಗುವೆನು. ನಾನು ಐಗುಪ್ತ್ಯದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವುದಿಲ್ಲ.


ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ.


ಅಬ್ರಹಾಮನಿಗೆ ಸುನ್ನತಿಯಾದಾಗ ಅವನಿಗೆ ತೊಂಭತ್ತೊಂಭತ್ತು ವರ್ಷವಾಗಿತ್ತು.


ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು.


ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ.


ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ.


ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವುದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವುದಕ್ಕೆ ಮೊದಲೇ ಎಣಿಸಲ್ಪಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು